ನವದೆಹಲಿ: ಮೇಕೆದಾಟು ಬಳಿ ಸಮತೋಲನ ಜಲಾಶಯ ನಿರ್ಮಿಸುವ ಉದ್ದೇಶದಿಂದ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರ ಜಲ ಆಯೋಗಕ್ಕೆ ಕರ್ನಾಟಕ ಜಲಸಂಪನ್ಮೂಲ ಇಲಾಖೆ ಸಲ್ಲಿಸಿದೆ.

ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಜಲ ಆಯೋಗಕ್ಕೆ ರಾಜ್ಯ ಸರ್ಕಾರ 2019ರ ಜನವರಿಯಲ್ಲಿ ಸಲ್ಲಿಸಿತ್ತು. ಆಗ ಯೋಜನೆಯ ಮೊತ್ತ ₹9 ಸಾವಿರ ಕೋಟಿ ಆಗಿತ್ತು. ಡಿಪಿಆರ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ಅನುಮೋದನೆ ನೀಡಬೇಕು ಎಂದು ಜಲ ಆಯೋಗ ಷರತ್ತು ವಿಧಿಸಿತ್ತು.

‘ಡಿಪಿಆರ್ ಕುರಿತು ಪ್ರಾಧಿಕಾರ ಚರ್ಚೆ ನಡೆಸಬಹುದು. ಆದರೆ, ಈ ಪ್ರಸ್ತಾವದ ಆಧಾರದಲ್ಲಿ ಅಧಿಕೃತವಾಗಿ ಯಾವುದೇ ಅಭಿಪ್ರಾಯಕ್ಕೆ ಬರುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ 2022ರ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಆ ಬಳಿಕ ಡಿಪಿಆರ್ ಅನ್ನು ಜಲ ಆಯೋಗಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮರಳಿಸಿತ್ತು.

ಕಾವೇರಿ ನ್ಯಾಯಮಂಡಳಿ ತೀರ್ಪು ಉಲ್ಲಂಘಿಸಿ ಕರ್ನಾಟಕ ಸರ್ಕಾರವು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025ರ ನವೆಂಬರ್ 13ರಂದು ವಜಾಗೊಳಿಸಿತ್ತು.

ಆ ಬಳಿಕ ಜಲ ಆಯೋಗವು ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿತು. ಜಲಸಂಪನ್ಮೂಲ ಇಲಾಖೆಯಿಂದ ಕೆಲವೊಂದು ವಿವರಣೆಗಳನ್ನು ಕೇಳಿತು. ಈ ಆಕ್ಷೇಪಗಳಿಗೆ ಇಲಾಖೆಯು ಏಪ್ರಿಲ್ 21ರಂದು ಉತ್ತರ ನೀಡಿದೆ. ಜತೆಗೆ, ಯೋಜನೆಯ ಡಿಪಿಆರ್ ಸಲ್ಲಿಸಿದೆ. ಆದರೆ, ಯೋಜನಾ ಮೊತ್ತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.