ಬೆಂಗಳೂರು: ‘ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅನುಮತಿ ಕೋರಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ’ ಎಂಬ ತಮಿಳುನಾಡು ಸಚಿವ ದೊರೈ ಮುರುಗನ್ ಹೇಳಿಕೆ ಕುರಿತು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ನಮ್ಮ ನೀರು ನಮ್ಮ ಹಕ್ಕು. ಅವರು ತಮ್ಮದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ’ ಎಂದರು.

‘ಈ ಹಿಂದೆ ಅನೇಕ ಬಾರಿ ಮಾತುಕತೆ ಮಾಡಲಾಗಿತ್ತು. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿಪಡಿಸಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ’ ಎಂದು ಹೇಳಿದರು.

ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಕೆ ಮಾಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ‘ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಸರ್ಕಾರಕ್ಕೂ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

‘ಕಾಂಗ್ರೆಸ್ನವರ ಸ್ನೇಹಿತರಾಗಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಒಪ್ಪಿಸಲಿ’ ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, ‘ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಕೈಹಿಡಿದು ಒಪ್ಪಿಗೆ ಕೊಡಿಸುವುದಾಗಿ ಹೇಳಿದ್ದರು. ಅವರು ಏಕೆ ಕೊಡಿಸುತ್ತಿಲ್ಲ? ರಾಜಕೀಯದಲ್ಲಿ ಅನೇಕ ಒತ್ತಡಗಳಿರುತ್ತವೆ’ ಎಂದು ಹೇಳಿದರು.

ಕೃಷ್ಣಾ ನೀರು ಬಳಕೆ ಕುರಿತು ಚರ್ಚೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿಯವರ ಸಮಯ ಕೋರಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಬಳಿಕ ಹೋಗಿ ಭೇಟಿ ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.