ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ತಕ್ಷಣದಿಂದಲೇ ಜಾರಿಯಾಗುವಂತೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆ ಪಡೆಯಬಹುದು.

ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ. ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ. ಜತೆಗೆ ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.