ಬೆಂಗಳೂರು: ‘ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು. ಈ ನೀತಿ ಜಾರಿ ಸಂಬಂಧ ಮಸೂದೆ ಮಂಡಿಸಲಾಗುವುದು ಅಥವಾ ಸುಗ್ರೀವಾಜ್ಞೆ ಹೊರಡಿಸಲಾಗುವುದು’ ಎಂದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಋತುಚಕ್ರ ನೀತಿ 2025’ಕ್ಕೆ ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಲಾಡ್, ‘ಸರ್ಕಾರದ ಕಾನೂನನ್ನು ಎಲ್ಲರೂ ಅನುಷ್ಠಾನ ಮಾಡಬೇಕು, ಪಾಲಿಸಲೇಬೇಕು. ಇದನ್ನು ಕಂಪನಿಗಳು ಕೇವಲ ಒಂದು ಕಾನೂನು ಎಂಬ ದೃಷ್ಟಿಯಲ್ಲಿ ಪರಿಗಣಿಸದೆ, ಮಾನವೀಯ ದೃಷ್ಟಿಯಿಂದಲೂ ನೋಡಬೇಕು. ಈ ನೀತಿ ಜಾರಿ ಸಂಬಂಧ ಇನ್ನಷ್ಟು ಚರ್ಚೆ ಮಾಡಲಾಗುವುದು’ ಎಂದರು.

‘ಮುಟ್ಟಿನ ರಜೆ ಕೊಡಬೇಕು ಎಂಬ ಕಾರಣಕ್ಕೆ ಕಂಪನಿಗಳು ಮಹಿಳಾ ಉದ್ಯೋಗಿಗಳನ್ನು ಕೆಲಸಕ್ಕೆ ಹೆಚ್ಚು ನೇಮಿಸಿಕೊಳ್ಳಲು ಹಿಂದೇಟು ಹಾಕಬಹುದಲ್ಲವೇ’ ಎಂಬ ಪ್ರಶ್ನೆಗೆ, ‘ಒಮ್ಮೆ ಜಾರಿ ಮಾಡಿ ಅದರ ಸಾಧಕ ಬಾಧಕ ನೋಡೊಣ. ಹಲವು ಕಂಪನಿಗಳು ಈ ನೀತಿಯನ್ನು ಈಗಾಗಲೇ ಪಾಲಿಸುತ್ತಿವೆ’ ಎಂದರು.

‘ಮಹಿಳಾ ಉದ್ಯೋಗಿಗೆ ಮುಟ್ಟಿನ ರಜೆ ಕೊಡಬೇಕು ಎಂಬ ಸಾಮಾನ್ಯ ಜ್ಞಾನ, ಸೂಕ್ಷ್ಮತೆ ಕಂಪನಿಗಳಿಗೆ ಇರಬೇಕು. ಹೆಣ್ಣು ಮಕ್ಕಳ ಸಮಸ್ಯೆಯನ್ನು ಕಂಪನಿಗಳು ಅರ್ಥ ಮಾಡಿಕೊಳ್ಳಬೇಕು. ಹೆಚ್ಚು ರಜೆ ಕೊಟ್ಟರೆ ಸಮಸ್ಯೆ ಆಗಲಿದೆ ಎಂಬ ದೂರುಗಳು ಬಂದರೆ, ಅದನ್ನು ಪರಿಗಣಿಸಿ ಏನು ಮಾಡಬೇಕು ಎಂಬ ಬಗ್ಗೆ ಪರಿಶೀಲಿಸಲಾಗುವುದು’ ಎಂದೂ ಲಾಡ್ ಹೇಳಿದರು.

‘ಸಮಾಜದಲ್ಲಿ ಹಾಗೂ ಕುಟುಂಬದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಅವರು ಮನೆಗಳಲ್ಲಿ ದುಡಿಯುತ್ತಾರೆ, ಹೊರಗಡೆ ಕೆಲಸಕ್ಕೂ ಹೋಗುತ್ತಾರೆ. ಅವರ ಮೇಲೆ ಮಾನಸಿಕ ಒತ್ತಡ ಇರುತ್ತದೆ. ಮಧ್ಯಮ ವರ್ಗದ ದುಡಿಯುವ ಮಹಿಳೆಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾಹುಕಾರರ ಮನೆಯಲ್ಲಿನ ಮಹಿಳೆಯರು ಕೆಲಸಕ್ಕೆ ಆಳುಗಳನ್ನು ಇಟ್ಟುಕೊಳ್ಳುತ್ತಾರೆ. ಒಂದು ದಿನ ರಜೆ ಸಿಕ್ಕರೆ ಅವರು ಮಾರನೇ ದಿನ ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬಲ್ಲರು’ ಎಂದರು.
.ಸಂಪಾದಕೀಯ | ಋತುಚಕ್ರ ನೀತಿ: ಮಹತ್ವದ ನಡೆ ಅನುಷ್ಠಾನದಲ್ಲಿ ಇಚ್ಛಾಶಕ್ತಿ ಅಗತ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.