ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಮುಟ್ಟಿನ ಅವಧಿಯಲ್ಲಿ ಮಹಿಳೆಯರು ಹೇಗೆ ವಿವಿಧ ಶಾರೀರಿಕ ಬದಲಾವಣೆಗಳಿಗೆ ಒಳಗಾಗುತ್ತಾರೆ. ಉದ್ಯೋಗಸ್ಥ ಮಹಿಳೆಯರು ಅನುಭವಿಸುವ ಸಂಕಷ್ಟ, ಸವಾಲುಗಳು, ಕೆಲಸ ಮಾಡುವ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಅನುಸರಿಸಬೇಕಾದ ನಿಯಮಗಳು, ವಿಶ್ರಾಂತಿಯ ಅಗತ್ಯತೆ ಕುರಿತು ಸಮಿತಿಯ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ’ ಎಂದರು.