ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರಿಗೆ ಬಿಜೆಪಿಯಿಂದ ಮಾನಸಿಕ ಹಿಂಸೆ: ಡಿ.ಕೆ. ಶಿವಕುಮಾರ್‌

Published 22 ಏಪ್ರಿಲ್ 2024, 15:33 IST
Last Updated 22 ಏಪ್ರಿಲ್ 2024, 15:33 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಸ್ಲಿಂ ಧರ್ಮೀಯರಿಗೆ ಚಿತ್ರಹಿಂಸೆ ನೀಡಿ ಈ ದೇಶ ಬಿಟ್ಟು ಹೋಗಬೇಕು ಎನ್ನುವಂತಹ ವಾತಾವರಣವನ್ನು ಬಿಜೆಪಿ ನಿರ್ಮಾಣ ಮಾಡುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮದು ಸರ್ವ ಜನಾಂಗದ ತೋಟ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ. ನಾವು ಸಂವಿಧಾನದ ಪ್ರಕಾರ ನಡೆಯುತ್ತಿದ್ದೇವೆ. ಆದ ಕಾರಣ, ಯಾವುದೇ ಅಪರಾಧ ಪ್ರಕರಣ ನಡೆದರೂ ಯಾರನ್ನೂ ರಕ್ಷಿಸುವ ಪ್ರಮೇಯವೇ ಇಲ್ಲ’ ಎಂದರು.

‘ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದೆ’ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು‌ ಯಾವ ಕೆಲಸವನ್ನೂ ಮಾಡಿಲ್ಲವಲ್ಲ. ಅದಕ್ಕೆ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ವಿಫಲವಾಗಿದೆ. ಮುಂದೆ ದೊಡ್ಡ ಎಂಜಿನ್ ಕೂಡ ವಿಫಲವಾಗಲಿದೆ’ ಎಂದು ವ್ಯಂಗ್ಯವಾಡಿದರು.

‘ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಎಚ್ಚರಗೊಂಡಿರುವ ಬಿಜೆಪಿಯವರು ಜಾಹೀರಾತು ನೀಡಿದ್ದಾರೆ. ನಮ್ಮ ಜನರಿಗೆ ಯಾವುದು ಸರಿ, ಯಾವುದು ತಪ್ಪು ಎಂದು ಯೋಚನೆ ಮಾಡುವ ಶಕ್ತಿ, ಪ್ರಜ್ಞೆ ಎರಡೂ ಇದೆ’ ಎಂದೂ ಹೇಳಿದರು.

ಬಿಜೆಪಿಯವರು ಚಿಪ್ಪು ಅಭಿಯಾನ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ‘ನಾವು ಚಿಪ್ಪು ಕೊಟ್ಟಿಲ್ಲ. ಕನ್ನಡದ ಬಾವುಟ ಹಿಡಿದು ಹೋರಾಟ ಮಾಡುವವರು ನಾವು, ಕನ್ನಡಿಗರ ಪರವಾಗಿ ನಮ್ಮ ತೆರಿಗೆ, ನಮ್ಮ ಹಕ್ಕು ಹೋರಾಟ ಮಾಡಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT