ಬೆಂಗಳೂರು: ಮೀಟರ್ ಬಡ್ಡಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಸಲು ₹5,000 ಲಂಚ ಪಡೆಯುತ್ತಿದ್ದ ವೇಳೆ ಆವಲಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೋನದಾಸಪುರ ನಿವಾಸಿ ಪವಿತ್ರ ಎಂಬುವವರು ಮೀಟರ್ ದಂಧೆ ನಡೆಸುವ ವ್ಯಕ್ತಿಗಳ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜಾತಿನಿಂದನೆ ಕಾಯ್ದೆಯ ಅಡಿಯಲ್ಲೂ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಹಾಯಕ ತನಿಖಾಧಿಕಾರಿ ಮಧುಸೂದನ್ ಮತ್ತು ಠಾಣಾ ಸಿಬ್ಬಂದಿ ಮಹೇಶ್ ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಪವಿತ್ರ ಅವರು ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ದೂರುದಾರರು ಪೊಲೀಸ್ ಠಾಣೆಯ ಬಳಿ ಆರೋಪಿಗಳಿಗೆ ಲಂಚದ ಹಣ ನೀಡಿದ್ದರು. ಆಗ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಲಾಯಿತು. ಲಂಚದ ಹಣ ವಶಕ್ಕೆ ಪಡೆದುಕೊಂಡು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.