ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ : ₹15,617 ಕೋಟಿ ವೆಚ್ಚದಲ್ಲಿ ನಿರ್ಮಾಣ

2028 ರ ವೇಳೆಗೆ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆ
Published 14 ಮಾರ್ಚ್ 2024, 16:40 IST
Last Updated 14 ಮಾರ್ಚ್ 2024, 16:40 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊ 3ನೇ ಹಂತದ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

₹15,617 ಕೋಟಿ ಅಂದಾಜು ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, 2028ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನೀರಿಕ್ಷೆ ಇದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಮೆಟ್ರೊ 3ನೇ ಹಂತ ಅಗತ್ಯವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ರಾಜ್ಯ ಶೇ 80 ರಿಂದ ಶೇ 85 ರಷ್ಟು ಮೊತ್ತ ಭರಿಸಲಿದ್ದು, ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದರು.

ಮೆಟ್ರೊ 3ನೇ ಹಂತ ಹೆಬ್ಬಾಳ ಮೇಲ್ಸೇತುವೆಯಿಂದ ಗೊರಗುಂಟೆ ಪಾಳ್ಯ, ತುಮಕೂರು ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕನಕಪುರ ರಸ್ತೆ ಮಾರ್ಗವಾಗಿ ಜೆ.ಪಿ.ನಗರವನ್ನು ತಲುಪಲಿದೆ. ಒಟ್ಟು 32.15 ಕಿ.ಮೀ ಉದ್ದದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಇದಕ್ಕೆ ಭೂಸ್ವಾಧೀನ ಅಗತ್ಯವಿದೆ. ಬಿಎಂಆರ್‌ಸಿಎಲ್‌ ಈಗಾಗಲೇ ಯೋಜನಾ ವರದಿಯನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಮರಗಳ ಉದ್ಯಾನ: ಕೆ.ಆರ್‌.ಪುರ ತಾಲ್ಲೂಕು ಎನ್‌ಜಿಇಎಫ್‌ನಲ್ಲಿ 110 ಎಕರೆ ಜಮೀನು ಲಭ್ಯವಿದ್ದು, ಇಲ್ಲಿ 65 ಎಕರೆ ಜಾಗದಲ್ಲಿ ಮರಗಳ ಉದ್ಯಾನ( ಟ್ರೀ ಪಾರ್ಕ್‌) ನಿರ್ಮಿಸಲು ನಿರ್ಧರಿಸಲಾಯಿತು. ಇದಕ್ಕೆ ₹11 ಕೋಟಿ ಒದಗಿಸಲಾಗುವುದು ಎಂದು ಹೇಳಿದರು.

ಇಲ್ಲಿ ಒಂದು ಎಕರೆ ಭೂಮಿಗೆ ₹25 ಕೋಟಿಯಿಂದ ₹30 ಕೋಟಿ ಬೆಲೆ ಇದೆ. ಅಂದರೆ, ಸುಮಾರು ₹1500 ಕೋಟಿ ಮೌಲ್ಯದ ಜಾಗವನ್ನು ಉದ್ಯಾನ ನಿರ್ಮಿಸಲು ಬಳಸಿಕೊಳ್ಳಲು ನಿರ್ಧರಿಸಲಾಯಿತು. ನಗರದ ಮಧ್ಯಭಾಗದಲ್ಲಿ ಲಾಲ್‌ಬಾಗ್‌, ಕಬ್ಬನ್‌ಪಾರ್ಕ್‌ ಇವೆ. ಆದರೆ, ಹೊರವಲಯದ ಜನರಿಗೆ ಅಂತಹ ಸೌಲಭ್ಯಗಳು ಇಲ್ಲ. ಆದ್ದರಿಂದ ಮಕ್ಕಳು ಮತ್ತು ವಯಸ್ಕ‌ರಿಗೆ ಅನುಕೂಲವಾಗುವಂತೆ ಕ್ರೀಡಾಂಗಣ ಸಹಿತ ವಿವಿಧ ಸೌಲಭ್ಯಗಳನ್ನು ಒಳಗೊಂಡ ಪಾರ್ಕ್‌ ನಿರ್ಮಿಸಲು ನಿರ್ಧರಿಸಲಾಯಿತು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT