ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

6 ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಳ: ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ ಇಲಾಖೆ

Published 10 ನವೆಂಬರ್ 2023, 8:33 IST
Last Updated 10 ನವೆಂಬರ್ 2023, 8:33 IST
ಅಕ್ಷರ ಗಾತ್ರ

ಬೆಂಗಳೂರು: ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಳಕ್ಕೆ ಅನುಮತಿ‌ ನೀಡುವಂತೆ ಕೋರಿ ಪಶುಸಂಗೋಪನಾ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಿದೆ.

'ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇಕಡ 5ರವರೆಗೆ ಹಾಲಿನ ದರ‌ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ‌ ನೀಡಬೇಕು' ಎಂದು ಪ್ರಸ್ತಾವದಲ್ಲಿ ಕೋರಲಾಗಿದೆ.

ಕ್ಷೀರ ಭಾಗ್ಯ ಯೋಜನೆಗೆ ಕೆಎಂಎಫ್ ಪೂರೈಸುತ್ತಿರುವ ಹಾಲಿನಪುಡಿಯ ದರವನ್ನು ಪ್ರತಿ ಕೆ.ಜಿ.ಗೆ ₹400+ ಸರಕು ಮತ್ತು ಸೇವಾ ತೆರಿಗೆ ಎಂಬುದಾಗಿ ನಿಗದಿಪಡಿಸಬೇಕು. ಈಗ ಪ್ರತಿ ಕೆ.ಜಿ. ಹಾಲಿನ ಪುಡಿಗೆ ₹300+ ತೆರಿಗೆ ನೀಡಲಾಗುತ್ತಿದೆ. ಇದರಿಂದ ಕೆಎಂಎಫ್ ಗೆ ನಷ್ಟವಾಗುತ್ತಿದೆ ಎಂದು ಇಲಾಖೆ‌ ಹೇಳುತ್ತಿದೆ.

ದರ ಹೆಚ್ಚಳಕ್ಕೆ ಒತ್ತಡವಿದೆ: ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, 'ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಮಾಡುವುದಿಲ್ಲ' ಎಂದರು.

ಉತ್ಪಾದನಾ ವೆಚ್ಚ ಹೆಚ್ಚಳದಿಂದ ಆಗುತ್ತಿರುವ ಹೊರೆ ಕುರಿತು ಹಾಲು ಉತ್ಪಾದಕರ ಒಕ್ಕೂಟಗಳು ಸಭೆಯಲ್ಲಿ ಅಹವಾಲು ಸಲ್ಲಿಸಿವೆ. ನಂದಿನಿ ಹಾಲಿನ‌ ದರ ಪ್ರತಿ ಲೀಟರ್ ಗೆ ₹ 47 ಇದೆ. ಇತರ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಾಗಿದೆ ಎಂದು ಹೇಳಿದರು.

ಕೆಎಂಎಫ್ ನಂದಿನ ಹಾಲಿನ ದರವನ್ನು ಸೆಪ್ಟೆಂಬರ್ 1 ರಂದು ಪ್ರತಿ ಲೀಟರ್ ಗೆ ₹3ರಷ್ಟು ಹೆಚ್ಚಳ ಮಾಡಿತ್ತು. ಆದರೆ, ಅಮೂಲ್ 2022ರ ಮಾರ್ಚ್ ನಿಂದ 2023ರ ಫೆಬ್ರುವರಿಯವರೆಗೆ ಹತ್ತು ತಿಂಗಳ ಅವಧಿಯಲ್ಲಿ ಲೀಟರ್ ಗೆ 12 ಹೆಚ್ಚಳ‌ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT