ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ದರ ಹಾಗೂ ಪ್ರತಿ ಲೀಟರ್ ಹಾಲು ಖರೀದಿಗೆ ಕನಿಷ್ಠ ₹ 40 ದರ ನಿಗದಿಪಡಿಸುವುದೂ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಕಿಸಾನ್ ಸಂಘವುಒತ್ತಾಯಿಸಿದೆ.

ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಸಂಘದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.

ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರರಾಷ್ಟ್ರಪತಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ
ವನ್ನುಸಂಘಟನೆಯು ರಾಜ್ಯದಾದ್ಯಂತ ಹಮ್ಮಿಕೊಂಡಿತ್ತು.

‘ಮಳೆಯಿಂದ ಕೊಚ್ಚಿ ಹೋಗಿರುವಕೃಷಿ ಜಮೀನುಗಳಿಗೆ ಹೋಗುವ ದಾರಿಗಳನ್ನು ಸರಿಪಡಿಸಲು ಸರ್ಕಾರ ಹಣ ಮಂಜೂರು ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲ ರೈತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ₹10 ಲಕ್ಷಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದು ಸಂಘದ ಬೆಂಗಳೂರು ಘಟಕದ ಅಧ್ಯಕ್ಷಪಂಪಣ್ಣ ಆಗ್ರಹಿಸಿದರು. ‘ಬಗರ್‌ಹುಕುಂ ಸಾಗುವಳಿ ಸಕ್ರಮ ಯೋಜನೆ
ಯಡಿ ಮಂಜೂರಾದ ಭೂಮಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಬೇಕು. ರೈತರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ನೀಡಬೇಕು. ಕೋವಿಡ್‌ನಿಂದ ನಷ್ಟಕ್ಕೆ ಸಿಲುಕಿರುವ ರೈತರಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.