ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಬೆಳಿಗಳಿಗೆ ಬೆಂಬಲ ಬೆಲೆ: ಬೀದರ್‌ ಕ್ಷೇತ್ರದ 2 ಲಕ್ಷ ರೈತರಿಗೆ ಲಾಭ –ಖೂಬಾ

Published 8 ಜೂನ್ 2023, 12:33 IST
Last Updated 8 ಜೂನ್ 2023, 12:33 IST
ಅಕ್ಷರ ಗಾತ್ರ

ಬೀದರ್‌: ‘ಪ್ರಧಾನಿ ನರೇಂದ್ರ ಮೋದಿಯವರು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿರುವುದರಿಂದ ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಲಕ್ಷ ರೈತರಿಗೆ ಪ್ರಯೋಜನವಾಗಲಿದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಮೋದಿಯವರು ಸದಾಕಾಲ ದೇಶದ ಬೆನ್ನೆಲುಬಾದ ಅನ್ನದಾತನ ಬೆನ್ನಿಗೆ ನಿಂತಿದ್ದಾರೆ. ಅವರ ಈ ನಿರ್ಧಾರದಿಂದ ಮತ್ತೊಮ್ಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೇಂದ್ರ ಸರ್ಕಾರವು ದೇಶದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.

ಬೀದರ್‌ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬೆಳೆಯುವ ತೊಗರಿ ಬೇಳೆಗೆ ₹ 7,000 (₹ 400 ಹೆಚ್ಚಳ), ಹೆಸರು ಬೇಳೆಗೆ ₹ 8,558 (₹ 803 ಹೆಚ್ಚಳ), ಉದ್ದಿನ ಬೇಳೆಗೆ ₹ 6,950 (₹ 350 ಹೆಚ್ಚಳ), ಸೂರ್ಯಕಾಂತಿ ಬೀಜ ₹ 6,760 (₹ 360 ಹೆಚ್ಚಳ), ಸೋಯಾಬೀನ್ ಹಳದಿ ₹ 4,600 (₹ 300 ಹೆಚ್ಚಳ), ಜೋಳ ಹೈಬ್ರಿಡ್ ₹ 3,180 (₹ 210 ಹೆಚ್ಚಳ), ಜೋಳ ಮಾಲ್ದಂಡಿ ₹ 3,225 (₹ 235 ಹೆಚ್ಚಳ) ಸೇರಿದಂತೆ ಇತರೆ ಬೆಳೆಗಳಿಗೆ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ಘೋಷಿಸಲಾಗಿದೆ. ರೈತರು ಇದರ ಪ್ರಯೋಜನ ಪಡೆಯಬೇಕು. ಈ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT