ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವೆಲ್ಲ ಪರೀಕ್ಷೆ ಬರೆದಿದ್ದೇವೆ. ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ವೈಯಕ್ತಿಕ ಸಮಸ್ಯೆ, ರಾಜ್ಯ ಸರ್ಕಾರ ಮತ್ತು ಪಕ್ಷದ ಮೂಲಭೂತ ಸಮಸ್ಯೆಗಳ ಬಗ್ಗೆ ಹೈಕಮಂಡ್ಗೆ ವಿವರಣೆ ನೀಡಿದ್ದೇನೆ ಎಂದು ಹೇಳಿದರು.

ಸರ್ಕಾರ ಹಾಗೂ ಪಕ್ಷದ ಮೂಲಭೂತ ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಏನೇ ಆಗಲಿ ಪರೀಕ್ಷೆ ಬರೆಯಲಾಗಿದ್ದು, ಅತೀ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಖಚಿತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಅರುಣ್ ಸಿಂಗ್ ವರದಿ ಬಗ್ಗೆ ಗೊತ್ತಿಲ್ಲ: ಯೋಗೇಶ್ವರ್್

ಒಬ್ಬ ಜವಾಬ್ದಾರಿ ಸಚಿವನಾಗಿ ನಾನು ನನ್ನ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದೇನೆ. ನನ್ನ ವೈಯಕ್ತಿಕ ನೋವುಗಳು ಹಾಗೂ ಸಮಸ್ಯೆಗಳನ್ನು ನಮ್ಮ ದೆಹಲಿ ನಾಯಕರ ಮುಂದೆ ಹೇಳಿದ್ದೇನೆ. ಪಕ್ಷಕ್ಕೆ ಧಕ್ಕೆ ಉಂಟಾಗಬಾರದು ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಹಿನ್ನಲೆಯಲ್ಲಿ, ನಾಲ್ಕು ಗೋಡೆಗಳ ಮಧ್ಯೆ ವಿವರಣೆ ನೀಡಿದ್ದೇನೆ ಎಂದರು.

ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ನನಗೆ ತುಂಬಾ ತೊಂದರೆ ಆಗುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ನಾಯಕರು, ಕಾಂಗ್ರೆಸ್ ಮತ್ತು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅಡ್ಜೆಸ್ಟ್ಮೆಂಟ್ ಪಾಲಿಟಿಕ್ಸ್ ಬೇಡ. ಅದಕ್ಕೆ ಕೊನೆ ಹಾಡಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅತಿ ಉತ್ತಮ ಸರ್ಕಾರ ಇರಬೇಕು. ಪಕ್ಷದ ಸಂಘಟನೆ ಪ್ರಬಲವಾಗಿರಬೇಕು. ರಾಜ್ಯದ ಇತರ ಭಾಗಗಳಂತೆ ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಬಲವಾಗಿ ಬೇರೂರಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ಸಿ.ಪಿ ಯೋಗೇಶ್ವರ್ಮೇಲೆ ಕಿಡಿಕಾರಿದ ಸಚಿವ ಬಿ.ಸಿ ಪಾಟೀಲ್

ನನಗೆ ಕೋಲಾರ ಜಿಲ್ಲೆ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಸದ್ಯಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಇದ್ದಾರೆ. ನನಗೆ ಕೋಲಾರ ಉಸ್ತುವಾರಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದರು.

ರಮೇಶ ರಾಜೀನಾಮೆ ಕೊಡಲ್ಲ:ನಾನು ಹಾಗೂ ರಮೇಶ್ ಜಾರಕಿಹೊಳಿ 20 ವರ್ಷದ ಸ್ನೇಹಿತರು. ಅವರ ಇತ್ತೀಚಿನ ರಾಜಕೀಯ ನಿಲುವಿನ ಬಗ್ಗೆ ಚರ್ಚಿಸಿಲ್ಲ. ಭೇಟಿ ಸಹ ಮಾಡಿಲ್ಲ. ಅವರು ಮುಂಬೈಗೆ ಹೋಗಿ ರಾಜೀನಾಮೆ ನೀಡುವ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಅವರು ಪಕ್ಷಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.