ಬುಧವಾರ, 17 ಜೂನ್ 2026
×
ADVERTISEMENT

ಸಚಿವ ಡಿ.ಸುಧಾಕರ್ ನಿಧನ: ಸಿಎಂ, ಡಿಸಿಎಂ ಸೇರಿ ಗಣ್ಯರ ಸಂತಾಪ

Published : 10 ಮೇ 2026, 3:06 IST
Last Updated : 10 ಮೇ 2026, 3:06 IST
ADVERTISEMENT
ಫಾಲೋ ಮಾಡಿ
Comments
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ಆಪ್ತರೂ ಆಗಿದ್ದ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದಿದ್ದು ಅತೀವ ದುಃಖವನ್ನುಂಟು ಮಾಡಿದೆ. ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಉತ್ತಮ ರೀತಿಯಲ್ಲಿ ಜನಪರ ಸೇವೆ ಮಾಡಿದ್ದರು. ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರನ್ನು ಅಗಲಿದ್ದು ವಿಷಾದದ ಸಂಗತಿ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರು ಮತ್ತು ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಅವರ ನಿಧನಕ್ಕೆ ನನ್ನ ಸಂತಾಪಗಳು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ಆರ್‌.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT