ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದ ವ್ಯಕ್ತಿಯೊಬ್ಬರಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಜಾಡಿಸಿ ಒದೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾದ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಸಚಿವರು ಕಾರಲ್ಲಿ ಕುಳಿತು ಪ್ರಯಾಣಕ್ಕೆ ಅಣಿಯಾಗುತ್ತಿರುವಾಗ ವ್ಯಕ್ತಿಯೊಬ್ಬರು ಸಮಸ್ಯೆ ತೋಡಿಕೊಂಡು ನ್ಯಾಯಕ್ಕಾಗಿ ಅಂಗಲಾಚಿದ್ದು ವಿಡಿಯೊದಲ್ಲಿದೆ. ಇದು ಕೆಲ ವರ್ಷದ ಹಳೆಯ ವಿಡಿಯೊ ಎನ್ನಲಾಗಿದ್ದು, ಭೂಕಬಳಿಕೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾದ ಬಳಿಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.