ಆಸ್ತಿ ನೋಂದಣಿಗೆ ಲಂಚ ಕೇಳಿದ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ಬೀದರ್ನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆಯಿತು.

ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು, ಕಚೇರಿಯಲ್ಲಿ ಲಂಚವೇನಾದರೂ ಪಡೆಯಲಾಗುತ್ತಿದೆಯಾ? ಎಂದು ಆಸ್ತಿ ನೋಂದಣಿಗೆ ಬಂದವರನ್ನು ವಿಚಾರಿಸಿದರು. ಆಸ್ತಿ ನೋಂದಣಿಗೆ ರೂ. 35.04 ಲಕ್ಷ ಸ್ಟ್ಯಾಂಪ್ ಡ್ಯೂಟಿ ಇದೆ. ಅಷ್ಟನ್ನು ಮಾತ್ರ ನಾವು ಕಟ್ಟಬೇಕು. ಆದರೆ, ಇವರು ರೂ. 48 ಲಕ್ಷ ಕಟ್ಟುವಂತೆ ಹೇಳುತ್ತಿದ್ದಾರೆ. ₹50 ಸಾವಿರ ಲಂಚ ಕೇಳಿದ್ದಾರೆ ಎಂದು ವ್ಯಕ್ತಿಯೊಬ್ಬರು ಉಪ ನೋಂದಣಾಧಿಕಾರಿ ಸುಭಾಷ್ ಹೊಸಳ್ಳಿ ಎದುರೇ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.