ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೊಂದಲ ಮಾಡದಂತೆ ಹೈಕಮಾಂಡ್ ಹೇಳಿದೆ: ಸಹಕಾರ ಸಚಿವ ಕೆ.ಎನ್. ರಾಜಣ್ಣ

Published 8 ಜುಲೈ 2024, 15:36 IST
Last Updated 8 ಜುಲೈ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್ ಹೈಕಮಾಂಡ್‌ ಹೇಳಿದೆ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನೋಡ್ರಿ, ಆ ವಿಚಾರವಾಗಿ ಯಾರೂ ಮಾತನಾಡಬಾರದು. ನಾಯಕತ್ವ ಬದಲಾವಣೆ ಏನೇ ಇದ್ದರೂ ಹೈಕಮಾಂಡ್ ಮಾಡಲಿದೆ’ ಎಂದರು.

‘ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ. ಈ ವಿಚಾರವಾಗಿ ಯಾವುದೇ ಗೊಂದಲ ಇರಬಾರದೆಂದು ನನಗೂ ಅನಿಸಿದೆ. ಗೊಂದಲ ಇರಬಾರದೆಂದು ಹೈಕಮಾಂಡ್ ಕೂಡ ಹೇಳಿದೆ. ಯಾವೆಲ್ಲಾ ಬದಲಾವಣೆ ಇದೆಯೊ, ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದು ಎಲ್ಲರಿಗೂ ಅನ್ವಯಿಸುತ್ತದೆ’ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾವ ಸಮಾವೇಶವೂ ಇಲ್ಲ, ಏನೂ ಇಲ್ಲ. ಚಿಂತನೆ ಇದೆಯೊ, ಇಲ್ಲವೊ ಎಂಬ ಬಗ್ಗೆ ಮುಂದೆ ಹೇಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT