ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೊದಾಮು ಇಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿಸಲು ಪ್ರತಿ ಕ್ವಿಂಟಾಲ್ ರಾಗಿಗೆ ₹4,290 ನಿಗದಿ ಪಡಿಸಲಾಗಿದೆ. ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ₹4,290, ಪ್ರತಿ ಕ್ವಿಂಟಾಲ್ ಬಿಳಿ ಜೋಳ ಹೈಬ್ರಿಡ್ ಧಾನ್ಯಕ್ಕೆ ₹ 3,371, ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ₹ 2,300 ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ರಾಗಿ ಗರಿಷ್ಠ 20 ಕ್ವಿಂಟಾಲ್, ಬಿಳಿ ಜೋಳ ಹೈಬ್ರಿಡ್ 150 ಕ್ವಿಂಟಾಲ್, ಭತ್ತ ಸಾಮಾನ್ಯ 50 ಕ್ವಿಂಟಾಲ್ ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ. ಒಂದು ಬಾರಿ ನೊಂದಣಿ ವೇಳೆಯಲ್ಲಿ ಇನ್ನೊಂದು ಬಾರಿ ಖರೀದಿ ವೇಳೆ. ಹಾಗಾಗಿ ನೊಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯ. ನೋಂದಣಿಯಾದ ರೈತರಿಂದ ಮಾತ್ರ ರಾಗಿ ಖರೀದಿಸಲಾಗುವುದು. ಜನವರಿ ತಿಂಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ ಮಾರ್ಚ್ 31 ಕ್ಕೆ ಅಂತ್ಯಗೊಳಿಸಲಾಗುವುದು ಎಂದರು.

ರೈತರು ಎಫ್.ಎಕ್ಯೂ ಗುಣಮಟ್ಟದ ರಾಗಿ, ಭತ್ತ, ಬಿಳಿ ಜೋಳವನ್ನು ಖರೀದಿ ಕೇಂದ್ರಗಳಿಗೆ ತರುವ ಮುನ್ನ ಸಮೀಪವಿರುವ ಖರೀದಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಬಯೋ ಮೆಟ್ರಿಕ್ ಮೂಲಕ ನೋಂದಣಿ ಮಾಡಿಸಬೇಕು. ಕೃಷಿ ಇಲಾಖೆಯಿಂದ ರೈತರಿಗೆ ನೀಡಲಾಗಿರುವ ‘ಫೂಟ್ಸ್’ ಐ.ಡಿ.ಸಂಖ್ಯೆಯನ್ನು ಪಡೆದು ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳೇಕು. ಫೂಟ್ಸ್ ಐ.ಡಿ ಇಲ್ಲದ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಇರುವುದಿಲ್ಲ. ನೊಂದಾಣಿ ಸಮಯದಲ್ಲಿ ರೈತರು ತಮ್ಮ ಆಧಾರ್ ಕಾರ್ಡ್ ತರುವುದು ಕಡ್ಡಾಯ ಎಂದು ತಿಳಿಸಿದರು.

ರೈತರು ಖರೀದಿ ಕೇಂದ್ರಕ್ಕೆ ಆಹಾರ ಧಾನ್ಯ ನೀಡಿ ಗ್ರೈನ್ ವೋಚರ್ ಪಡೆದ ನಂತರವೇ ಆಧಾರ್ ಕಾರ್ಡ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು ಎಂದರು.

ಬಯಪ ಅಧ್ಯಕ್ಷ ಶಾಂತಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಆಹಾರ ಇಲಾಖೆ ಉಪನಿರ್ದೇಶಕ ಶಂಕರ್ ಮೂರ್ತಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು, ಇತರೆ ಸಿಬ್ಬಂದಿ
ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.