ಬೆಂಗಳೂರು: ‘ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಅಶ್ಲೀಲ ಪದಬಳಕೆ ಮೂಲಕ ನಿಂದಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

‘ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಪ್ರಕಟಿಸುವ ಮೂಲಕ ರವಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.

‘ಸದನದಲ್ಲಿ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪದಗಳ ಬಗ್ಗೆ ಅಪರಾಧಿಕ ಪ್ರಾಸಿಕ್ಯೂಷನ್ ಮುಖಾಂತರ; ಶಾಸಕರಿಗೆ ಇರುವ ವಿನಾಯಿತಿಯ ಅಡಿಯಲ್ಲಿ ರಕ್ಷಣೆ ನೀಡಲು ಆಗುವುದಿಲ್ಲ. ಆರೋಪಿತ ಪದವನ್ನು ಬಳಕೆ ಮಾಡಿದ್ದರೆ ಅಥವಾ ಅಂತಹ ನಡತೆ ಪ್ರದರ್ಶಿಸಿದ್ದರೆ ಅದು ಮಹಿಳೆಯ ಘನತೆಗೆ ಹಾನಿ ಉಂಟು ಮಾಡುವಂತಹುದು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಪ್ರಾಸಿಕ್ಯೂಷನ್ ಪರ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.