ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು: ಹೆಬ್ಬಾಳಕರ

Published 4 ಫೆಬ್ರುವರಿ 2024, 13:42 IST
Last Updated 4 ಫೆಬ್ರುವರಿ 2024, 13:42 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ನನ್ನ ಪುತ್ರ ಮೃಣಾಲ್‌ ಕಣಕ್ಕಿಳಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಜಿಲ್ಲೆಯ ಜನರು ಅಪೇಕ್ಷೆ ಪಡುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರ ಕೈಗೊಳ್ಳುವುದು ಪಕ್ಷದ ವರಿಷ್ಠರು ಮತ್ತು ಜಿಲ್ಲಾ ಮುಖಂಡರಿಗೆ ಬಿಟ್ಟ ವಿಚಾರ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಪುತ್ರನಿಗೆ ಟಿಕೆಟ್ ನೀಡಬೇಕೆಂದು ನಾನು ಎಲ್ಲಿಯೂ ಹೇಳಿಲ್ಲ. ಗೆಲವಿನ ಸಾಮರ್ಥ್ಯದ ಮಾನದಂಡದ ಮೇಲೆ ಅಭ್ಯರ್ಥಿ ಆಯ್ಕೆಯಾಗಲಿದೆ. ನನ್ನ ಪುತ್ರ ಅಥವಾ ಯಾರಿಗೆ ಟಿಕೆಟ್‌ ಕೊಟ್ಟರೂ, ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

‘ಯಾರಿಗೆ ಟಿಕೆಟ್ ನೀಡಿದರೆ ಗೆಲ್ಲಬಹುದು ಎಂದು ಪಕ್ಷದವರು ಸಮೀಕ್ಷೆ ಮಾಡುತ್ತಿದ್ದಾರೆ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಟಿಕೆಟ್ ಪಡೆಯುವುದಕ್ಕಾಗಿಯೇ ಪೈಪೋಟಿ ನಡೆಸುವುದಲ್ಲ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ನಾವು ಚುನಾವಣೆಯನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಪ್ರತಿ ಹಂತದಲ್ಲೂ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT