ಬೆಂಗಳೂರು: ‘ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ ಬಳಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ’ ಎಂದರು.

‘ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ, ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು’ ಎಂದರು.

‘ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೇ ಸಿಗಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಲು ಮುಂದಾಗಿದೆ. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಚಿಂತನೆಯಿದೆ’ ಎಂದು ಅವರು ಹೇಳಿದರು.

‘ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ಒಂಬತ್ತು ಸಾವಿರ ಮಂದಿ ಪದವಿ ಪಡೆದವರು. ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದವರು. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಲು ಯಾವುದೇ ಸಮಸ್ಯೆಯಾಗದು’ ಎಂದು ಹೇಳಿದ ಹೆಬ್ಬಾಳಕರ, ‘ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣದ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.