ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಧು ಬಂಗಾರಪ್ಪ ಕಾರು ಅಪಘಾತ: ಸಚಿವರು ಅಪಾಯದಿಂದ ಪಾರು

Published 28 ಡಿಸೆಂಬರ್ 2023, 4:49 IST
Last Updated 28 ಡಿಸೆಂಬರ್ 2023, 4:49 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ನಂದಿಹಳ್ಳಿ ಬಳಿ ಬುಧವಾರ ರಾತ್ರಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರು ಮತ್ತು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧು ಬಂಗಾರಪ್ಪ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT