‘ಬೆಂಗಳೂರಿನಾಚೆಗೂ ಹೂಡಿಕೆಗೆ ಒಲವು’
‘ರಾಜ್ಯದ 2 ಮತ್ತು 3ನೇ ಶ್ರೇಣಿಯ ನಗರಗಳಲ್ಲಿ ಹೂಡಿಕೆ ಹಾಗೂ ವಿಸ್ತರಣೆ ಬಗ್ಗೆ ಹಲವು ಕಂಪನಿಗಳು ಒಲವು ವ್ಯಕ್ತಪಡಿಸಿವೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. ‘ಬೆಂಗಳೂರು ಆಚೆಗಿನ ನಗರಗಳು ಬೆಳೆಯಲು ರಾಜ್ಯ ಸರ್ಕಾರ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ 2ನೇ ಸ್ತರದ ನಗರಗಳಲ್ಲಿ ವಿಸ್ತರಣೆಗೆ ಟೆಕ್ ಮಹೀಂದ್ರಾ ಡೇಟಾ ಕೇಂದ್ರಗಳನ್ನು ಸ್ಥಾಪಿಸಲು ಭಾರ್ತಿ ಎಂಟರ್‌ಪ್ರೈಸಸ್ ಮತ್ತು ಸಿಫಿ ಟೆಕ್ನಾಲಜೀಸ್ ಆಸಕ್ತಿ ತೋರಿಸಿವೆ. ಕೃತಕ ಬುದ್ಧಿಮತ್ತೆ (ಎಐ) ಡೇಟಾ ಸೆಂಟರ್‌ಗಳು ಸೆಮಿಕಂಡಕ್ಟರ್‌ಗಳು ಸ್ಪೇಸ್ ಟೆಕ್ ಇಂಡಸ್ಟ್ರಿ 4.0 ಒಳಗೊಂಡಂತೆ ಹೊಸ ತಲೆಮಾರಿನ ಕೈಗಾರಿಕೆಗಳಿಗೆ ರಾಜ್ಯವು ಆದ್ಯತೆಯ ತಾಣವಾಗಿದೆ ಎಂದು ಜಾಗತಿಕ ಹೂಡಿಕೆದಾರರು ಮತ್ತು ತಂತ್ರಜ್ಞಾನ ದಿಗ್ಗಜರಿಗೆ ಮನದಟ್ಟು ಮಾಡಿಕೊಡಲಾಗಿದೆ’ ಎಂದು ವಿವರಿಸಿದರು.