ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಆಮ್ಲಜನಕದ ಬೇಡಿಕೆ ಪೂರೈಸಲು ಪ್ರತಿ ಕಂದಾಯ ವಿಭಾಗಕ್ಕೆ ತಲಾ 2 ಕ್ರಯೋ ಜೆನಿಕ್ ಆಮ್ಲಜನಕ ಟ್ಯಾಂಕರ್ ಹಾಗೂ ಎರಡು ಜಿಲ್ಲಾಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ಧರಿಸಿದೆ.

ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ಪಿ.ಆರ್. ರವೀಂದ್ರ ಸಮ್ಮುಖದಲ್ಲಿ ಶನಿವಾರ ಸಭೆ ನಡೆಸಿದ ಗಣಿ ಸಚಿವ ಮುರುಗೇಶ ನಿರಾಣಿ, ಕೆಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಎರಡು ಟ್ಯಾಂಕರ್ ಹಾಗೂ ಕರಾವಳಿ ಪ್ರದೇಶಕ್ಕೆ ಹೆಚ್ಚುವರಿಯಾಗಿ ಎರಡು ಟ್ಯಾಂಕರ್‌ಗಳನ್ನು ನೀಡಲಾಗುವುದು. ಇದರ ಜವಾಬ್ದಾರಿ ಯನ್ನು ಪ್ರಾದೇಶಿಕ ಆಯುಕ್ತರಿಗೆ ವಹಿ ಸಲಾಗುವುದು ಎಂದು ಸಭೆಯ ಬಳಿಕ ನಿರಾಣಿ ತಿಳಿಸಿ ದರು.

ಒಂದು ಕಂದಾಯ ವಿಭಾಗದ ಎರಡು ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಗೂ ಕರಾವಳಿ ಭಾಗದ ಎರಡು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗುವುದು. ಯಾವ ಜಿಲ್ಲೆಗೆ ತುರ್ತು ಆಗತ್ಯವಿದೆ ಎಂಬುದರ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವ ಹೊಣೆಯನ್ನು ಇಲಾಖೆಯ ವಿಭಾಗದ ಮಟ್ಟದ ಸಮಿತಿಗೆ ನೀಡಲಾಗಿದೆ ಎಂದು ವಿವರಿಸಿದರು.

1000 ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ ಎಲ್ಲಾ ಜಿಲ್ಲೆಗಳ ಸರ್ಕಾರ ಆಸ್ಪತ್ರೆಗಳಿಗೆ ಹಾಗೂ ಪಲ್ಸ್ ಆಕ್ಸಿಮೀಟರ್‌ಗಳನ್ನು ಸಂಗ್ರಹಿಸಿ ಇವುಗಳನ್ನು ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.