ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

Published 3 ಜೂನ್ 2024, 16:03 IST
Last Updated 3 ಜೂನ್ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಚಿವರು ಮುಖ್ಯಮಂತ್ರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾರೂ ಯಾವ ಬೆದರಿಕೆಯನ್ನೂ ಹಾಕಿಲ್ಲ’ ಎಂದರು.

ಬಿಜೆಪಿಯವರು ನಾಗೇಂದ್ರ ಅವರ ರಾಜೀನಾಮೆಗೆ ಜೂನ್‌ 6ರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT