ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನಿಗಮಗಳಿಗೆ 9 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

Published 25 ಜನವರಿ 2024, 23:30 IST
Last Updated 25 ಜನವರಿ 2024, 23:30 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 9 ಸಾವಿರ ಸಿಬ್ಬಂದಿಯನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದಲ್ಲಿ ನೂತನ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 13,800ಕ್ಕೂ ಅಧಿಕ ಸಿಬ್ಬಂದಿ ನಿವೃತ್ತಿಯಾಗಿದ್ದರಿಂದ ಆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ 1,619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಅಂತಿಮ ಹಂತದಲ್ಲಿದೆ’ ಎಂದರು.

‘ಶಕ್ತಿ ಯೋಜನೆಯನ್ನು ವಿರೋಧ ಪಕ್ಷಗಳು ಟೀಕಿಸಿದ್ದವು. ನಮ್ಮ ನಿರೀಕ್ಷೆ ಮೀರಿ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ. ಯೋಜನೆ ಜಾರಿಗೆ ಬರುವುದಕ್ಕೆ ಮುನ್ನ ನಿತ್ಯ 84 ಲಕ್ಷ ಜನ ಬಸ್‌ಗಳಲ್ಲಿ ಸಂಚರಿಸುತ್ತಿದ್ದರು. ಈಗ ನಿತ್ಯ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ, ಪ್ರಯಾಣಿಕರ ಬೇಡಿಕೆಯನ್ನು ನೀಗಿಸಲು ಹೊಸದಾಗಿ 5,800 ಬಸ್‌ಗಳನ್ನು ಖರೀದಿಸಲು ಆದೇಶ ನೀಡಲಾಗಿದೆ. ಮಾರ್ಚ್ ವೇಳೆಗೆ ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT