ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಗಲಭೆಯಲ್ಲಿ ಭಾಗಿಯಾಗಿದ್ದರೆ ದೇಶದ್ರೋಹಿ ಕಾನೂನಿನಡಿ ಕ್ರಮ: ಸದಾನಂದಗೌಡ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
Last Updated 25 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ದೇಶದ್ರೋಹಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಲಭೆಗಳ ವೇಳೆ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸುವ ಮೂಲಕ ಸರ್ಕಾರ ಸಾಂತ್ವನ ಹೇಳುತ್ತದೆ. ಬಳಿಕ ಘಟನೆ ಕುರಿತು ತನಿಖೆ ನಡೆಸಲಾಗುತ್ತದೆ. ಅದೇ ರೀತಿ, ಮಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ‍ಪರಿಹಾರ ಘೋಷಿಸಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೊದ ಅನುಸಾರ ಈ ಘಟನೆ ಪೂರ್ವನಿಯೋಜಿತವಾಗಿದೆ. ಈ ರೀತಿ ಗಲಭೆ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧನಿರ್ದಾಕ್ಷಿಣ್ಯವಾಗಿಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆ ಕರಾವಳಿ ಭಾಗದಲ್ಲಿ ನಡೆಯಲು ಅವಕಾಶ ನೀಡುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT