ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ವಿರುದ್ಧ ಕ್ರಿಮಿನಲ್ ಕೇಸ್; ಆದೇಶ ಪ್ರತಿ ಸಿಕ್ಕರೆ ಹೋರಾಟ –ಸತೀಶ ಜಾರಕಿಹೊಳಿ

Published 4 ಫೆಬ್ರುವರಿ 2024, 13:36 IST
Last Updated 4 ಫೆಬ್ರುವರಿ 2024, 13:36 IST
ಅಕ್ಷರ ಗಾತ್ರ

ಬೆಳಗಾವಿ: ‘ನನ್ನ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ ಪ್ರತಿ ಕೈಗೆ ಸಿಕ್ಕಿಲ್ಲ. ಅದು ಸಿಕ್ಕ ನಂತರ ಕಾನೂನು ಹೋರಾಟ ಮಾಡುತ್ತೇನೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಹಿಂದೂ ಪದದ ಹೇಳಿಕೆಗೆ ಸಂಬಂಧಿಸಿ ದಾಖಲಾದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸತೀಶ ಜಾರಕಿಹೊಳಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಆದೇಶಿಸಿದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

'ಹಿಂದೂ ಪದದ ಹೇಳಿಕೆ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದರು. ಕೆಳಹಂತದ ನ್ಯಾಯಾಲಯದಲ್ಲಿ ಅದು ತಿರಸ್ಕೃತಗೊಂಡಿತ್ತು. ಈಗ ಆದೇಶದಲ್ಲಿ ಏನಿದೆ ಎಂದು ನೋಡೋಣ' ಎಂದರು.

ಚುನಾವಣೆ ವೇಳೆ ಮತ್ತೆ ಪ್ರಕರಣ ಮುನ್ನೆಲೆಗೆ ಬರುತ್ತಿದೆಯೇ ಎಂಬ ಪ್ರಶ್ನೆಗೆ, 'ಇದು ಕಾನೂನು ಹೋರಾಟ. ಹಾಗಾಗಿ ನ್ಯಾಯಾಲಯದಲ್ಲಿ ಹೋರಾಡುತ್ತೇವೆಯೇ ಹೊರತು, ಹೊರಗೆ ಅಲ್ಲ' ಎಂದು ಸ್ಪಷ್ಟಪಡಿಸಿದರು.

'ಪಕ್ಷದ ಸಮೀಕ್ಷೆಯಲ್ಲಿ ಆಯ್ಕೆಯಾಗುವವರಿಗೆ ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್‌ ನೀಡಲಾಗುವುದು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT