ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂತರಾಜು ಅವರದ್ದು ಜಾತಿ ಗಣತಿ ಅಲ್ಲ: ಶಿವರಾಜ್‌ ತಂಗಡಗಿ

ಸರ್ಕಾರಕ್ಕೆ ವರದಿ ಸಲ್ಲಿಕೆಯಾಗದೆ, ಅಪಸ್ವರ ತೆಗೆಯುವುದು ಸರಿಯಲ್ಲ
Published : 9 ನವೆಂಬರ್ 2023, 10:41 IST
Last Updated : 9 ನವೆಂಬರ್ 2023, 10:41 IST
ಫಾಲೋ ಮಾಡಿ
Comments

ಬೆಂಗಳೂರು: ಎಚ್‌.ಕಾಂತರಾಜು ವರದಿ ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಸರಿಪಡಿಸುವ ಹಿನ್ನೆಲೆಯಲ್ಲಿ ತಯಾರಾದ ವರದಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ. ಈ ವರದಿಯನ್ನು ಜಾತಿ ಗಣತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ–ಅಂಶವನ್ನು ಸ್ಪಷ್ಟವಾಗಿ ತಿಳಿಯಬಹುದು. ಈ ವರದಿ ವಿರೋಧಿಸಿ ಕೆಲವು ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಇನ್ನು ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿ ವಿರೋಧ ಮಾಡುತ್ತಿರುವವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ಧವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ವರದಿ ಸ್ವೀಕಾರವಾಗಿಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿ ಅಡಗಿಲ್ಲ ಎಂದು ತಂಗಡಗಿ ಹೇಳಿದರು.

ಬಿಜೆಪಿಯವರು ಮೊದಲು ಜಾಮೂನು ಕೊಟ್ಟು ಬಳಿಕ ವಿಷ ಕೊಡುತ್ತಾರೆ ಎಂದು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ನಮಗೆ ಮೊದಲೇ ಗೊತ್ತು. ಸೋಮಶೇಖರ್ ಅವರಿಗೆ ಈಗ ಸತ್ಯದ ಅರಿವು ಆಗಿದೆ. ಈ ಹಿಂದೆ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರ್ಕಾರ ರಚನೆ ಮಾಡಲು ಬೆಂಬಲ ಕೊಟ್ಟ ನಮಗೆ ಆ ಮೇಲೆ ಏನು ಮಾಡಿದರು ಎಂಬುದು ರಾಜ್ಯದ ಜನತೆಗೆ ತಿಳಿದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT