ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಪುನರ್‌ ರಚನೆ ಆಗಬಹುದು: ಸಚಿವ ಮಲ್ಲಿಕಾರ್ಜುನ

Published 27 ಮೇ 2024, 16:21 IST
Last Updated 27 ಮೇ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್‌ರಚನೆ ಆಗಬಹುದು ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಸಂಪುಟ ಪುನರ್‌ರಚನೆ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆಗಬಹುದು ಎನ್ನುವ ಮೂಲಕ ಸಾಧ್ಯತೆಗಳ ಸುಳಿವು ನೀಡಿದರು.

ಚನ್ನಗಿರಿ ಲಾಕಪ್‌ ಸಾವು ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಲೋಪ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿ ಮೊದಲು ದೆಹಲಿಯ ವ್ಯವಸ್ಥೆ ಸರಿ ಮಾಡಲಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT