ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣ ತಾರ್ಕಿಕ ಅಂತ್ಯಕ್ಕೆ: ಸಚಿವ ಸುರೇಶ್ ಕುಮಾರ್

Last Updated 7 ಸೆಪ್ಟೆಂಬರ್ 2020, 7:10 IST
ಅಕ್ಷರ ಗಾತ್ರ

ಚಾಮರಾಜನಗರ: ದೊಡ್ಡ ದೊಡ್ಡ ಶಾಲೆಗಳಲ್ಲಿ ಓದುವ ಶ್ರೀಮಂತ ಮಕ್ಕಳನ್ನು ಡ್ರಗ್ಸ್ ಜಾಲಕ್ಕೆ ಸೆಳೆಯಲು ಐಸ್ ಕ್ರೀಮ್‌ಗೆಮಾದಕ ವಸ್ತುಗಳನ್ನು ಸವರಿ ಕೊಡಲಾಗುತ್ತದೆ ಎಂಬ ಅನುಮಾನ ಇದೆ.ಯುವ ಜನತೆಯನ್ನು ಹಾಳು ಮಾಡುತ್ತಿರುವರನ್ನುಹಿಡಿದು ಜೈಲಿಗೆ ಕಳುಹಿಸುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ವಿಚಾರವಾಗಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಮಾದಕ ವಸ್ತುಗಳು ಸಮಾಜ ಹಾಗೂ ಯುವ ಜನಾಂಗವನ್ನು ದುರ್ಬಲ ಮಾಡುತ್ತವೆ. ಇದನ್ನು ಬೇರು ಸಮೇತವಾಗಿ ಕಿತ್ತು ಹಾಕಬೇಕು’ಎಂದು ಹೇಳಿದರು.

‘ಮೂರು ವರ್ಷಗಳ ಹಿಂದೆಯೇ ಈ ಬಗ್ಗೆ ಬಿಜೆಪಿ ಧ್ವನಿ ಎತ್ತಿದೆ. ಡ್ರಗ್ಸ್ ಪ್ರಕರಣವನ್ನು ರಾಜ್ಯ ಸರ್ಕಾರ ತಾರ್ಕಿಕ ಅಂತ್ಯಕ್ಕೆ‌ ತಲುಪಿಸಲಿದೆ’ಎಂದು ಸುರೇಶ್ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT