ತುಮಕೂರು: ಕೊಪ್ಪಳದಿಂದ ಬೆಂಗಳೂರಿಗೆ ಪಯಣಿಸುತ್ತಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಗ್ಯದಲ್ಲಿ ಭಾನುವಾರ ರಾತ್ರಿ ಹಠಾತ್ ಏರುಪೇರಾಗಿ ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತರ ಬೆಂಗಳೂರಿಗೆ ತೆರಳಿದರು.

ಕೊಪ್ಪಳದಿಂದ ಬೆಂಗಳೂರಿಗೆ ತೆರಳುವಾಗ ಶಿರಾ ಬಳಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಿದ್ಧಗಂಗಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾದರು. ಚಿಕಿತ್ಸೆ ನಂತರ ಚೇತರಿಸಿಕೊಂಡರು.

ಚಿಕಿತ್ಸೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಯಾವತ್ತೂ ಈತರ ಆಗಿರಲಿಲ್ಲ. ಎದೆನೋವು ಕಾಣಿಸಿಕೊಂಡ ತಕ್ಷಣ ಕುಟುಂಬದ ವೈದ್ಯರ ಬಳಿ ಮಾತನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಹೇಳಿದ ನಂತರ ಬೆಂಗಳೂರಿಗೆ ತೆರಳುತ್ತಿದ್ದೇನೆ' ಎಂದು ಹೇಳಿದರು.

'ಯಾವುದೇ ಗಂಭೀರ ಸಮಸ್ಯೆ ಇಲ್ಲ. ಕೊಪ್ಪಳದಲ್ಲಿ ಬೆಳಗ್ಗೆಯಿಂದ ಸಂಜೆಯ ತನಕ ನಿರಂತರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ತಡವಾಗಿ ಊಟ ಮಾಡಿದ್ದರಿಂದ ಸಮಸ್ಯೆಯಾಗಿತ್ತು. ಈಗ ಯಾವುದೇ ತೊಂದರೆ ಇಲ್ಲ' ಎಂದರು.

'ಸಚಿವರಿಗೆ ಹೃದಯ ಸಂಬಂಧಿ ಸಮಸ್ಯೆ ಇಲ್ಲ. ಆರೋಗ್ಯ ಚೆನ್ನಾಗಿದೆ. ಅಗತ್ಯ ಚಿಕಿತ್ಸೆ ನೀಡಲಾಗಿದೆ' ಎಂದು ಸಿದ್ಧಗಂಗಾ ಆಸ್ಪತ್ರೆ ವೈದ್ಯ ಶರತ್ ಕುಮಾರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-17-865168042

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.