ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು: ಕೆ.ಎಚ್.‌ ಮುನಿಯಪ್ಪ

'ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ‌ ಕೆಳಗಿಳಿಯಬೇಕು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು' ಎಂದ ಸಚಿವ
Published 14 ಆಗಸ್ಟ್ 2023, 10:24 IST
Last Updated 14 ಆಗಸ್ಟ್ 2023, 10:24 IST
ಅಕ್ಷರ ಗಾತ್ರ

ಬೆಂಗಳೂರು: 'ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ‌ ಕೆಳಗಿಳಿಯಬೇಕು. ಉಳಿದವರಿಗೆ ಅವಕಾಶ ಮಾಡಿಕೊಡಬೇಕು' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದರು.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, 'ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಆ ಮೂಲಕ ನಾವು ದೇಶದಲ್ಲಿ ಹೊಸ ಪರಂಪರೆಯನ್ನು ಆರಂಭಿಸಿದಂತಾಗುತ್ತದೆ. ಇದು ನನ್ನ ವೈಯಕ್ತಿಕ ಸಲಹೆ' ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ನಿಗಮ,‌ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು.‌ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ‌ ಎಂ. ವೀರಪ್ಪ ಮೊಯಿಲಿ ಮಾತನಾಡಿ, 'ಪಕ್ಷ ಮತ್ತು ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬಹಿರಂಗವಾಗಿ ಚರ್ಚಿಸಬಾರದು. ಅದಕ್ಕೆ ಅವಕಾಶವನ್ನೂ ನೀಡಬಾರದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT