ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳಾ ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆ: ಹೈಕೋರ್ಟ್‌ ಆತಂಕ

Published 17 ಜೂನ್ 2024, 16:09 IST
Last Updated 17 ಜೂನ್ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕೆ ರೂಪಿಸಲಾಗಿರುವ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 498ಎ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ’ ಎಂದು ಹೈಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ.

ಕೌಟುಂಬಿಕ ಪ್ರಕರಣವೊಂದರಲ್ಲಿ ಪತಿಯ ವಿರುದ್ಧದ ಪ್ರಕರಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪತಿಯ ಕುಟುಂಬದವರನ್ನು ಅನಗತ್ಯವಾಗಿ ಅಪರಾಧ ಕೃತ್ಯದ ಜಾಲದಲ್ಲಿ ಸಿಲುಕಿಸುವಂತಹ ಪ್ರಕರಣಗಳನ್ನು ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗುತ್ತದೆ’ ಎಂದು ಹೇಳಿದೆ.

‘ದುರ್ಬಳಕೆ ಪ್ರಕರಣಗಳ ಬಗ್ಗೆ ಹೈಕೋರ್ಟ್‌ ಈ ಹಿಂದೆಯೇ ಹಲವು ಬಾರಿ ಎಚ್ಚರಿಸಿದ್ದರೂ ಇಂತಹ ಪ್ರಕರಣ ಮರುಕಳಿಸುತ್ತಲೇ ಇವೆ. ಈ ಪ್ರಕರಣಗಳಲ್ಲಿ ಪತಿಯ ವಿರುದ್ಧ ಮಾತ್ರವಲ್ಲದೆ, ಅವರ ಕುಟುಂಬದವರನ್ನೂ ಅನಗತ್ಯವಾಗಿ ಎಳೆಯಲಾಗುತ್ತಿದೆ. ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳದೇ ಹೊದರೆ ಈ ದಿಸೆಯಲ್ಲಿ ರೂಪಿಸಲಾಗಿರುವ ಕಾನೂನಿನ ದುರುಪಯೋಗ ಹೆಚ್ಚುತ್ತದೆ. ಆದ್ದರಿಂದ, ವಿಚಾರಣಾ ನ್ಯಾಯಾಲಯಗಳು ಪತಿಯ ಕುಟುಂಬದವರ ವಿರುದ್ಧದ ಪ್ರಕರಣಗಳನ್ನು ಮುಂದುವರಿಸುವಾಗ ತುಂಬಾ ಜಾಗ್ರತೆ ವಹಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT