ಬೆಂಗಳೂರು: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಿರ್ದೇಶಕರಾಗಿರುವ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆಯ, ಎಥೆನಾಲ್ ಘಟಕಕ್ಕೆ ಮೂರು ವಾರಗಳಲ್ಲಿ ಸಿಎಫ್‌ಒ (ಕನ್ಸೆಂಟ್ ಫಾರ್ ಆಪರೇಶನ್) ನೀಡಬೇಕು’ ಎಂದು ಹೈಕೋರ್ಟ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಆದೇಶಿಸಿದೆ.