ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ರಾತ್ರಿ ಶಾಸಕ ಜೆ.ಸಿ.ಮಾಧುಸ್ವಾಮಿ, ಜೆಡಿಎಸ್ ಕಾರ್ಯಕರ್ತ ಚಂದ್ರಣ್ಣ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾಧುಸ್ವಾಮಿ, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಂದ್ರಣ್ಣ, ‘ಶಾಸಕರಾಗಿ 11 ತಿಂಗಳು ಕಳೆದಿವೆ. ಈಗ ಗ್ರಾಮಕ್ಕೆ ಬಂದಿದ್ದೀರಿ. ನೀರಿಲ್ಲ. ನಮ್ಮ ಅನೇಕ ಸಮಸ್ಯೆಗಳು ಪರಿಹಾರ ಆಗಿಲ್ಲ. ನಮ್ಮ ಪ್ರಶ್ನೆಗೆ ಉತ್ತರಿಸಬೇಕು’ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶಾಸಕರು, ಚಂದ್ರಣ್ಣ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಜೆಡಿಎಸ್ ಮುಖಂಡರು ಹುಳಿಯಾರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರತಿದೂರು: ‘ನಿನ್ನ ಎಲ್ಲ ಪ್ರಶ್ನೆಗೆ ಉತ್ತರಿಸುತ್ತೇನೆ. ಸ್ವಲ್ಪ ತಡಿ’ ಎಂದು ಹೇಳಿದರೂ ಶಾಸಕರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು ಚಂದ್ರಣ್ಣ ಗಲಾಟೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.