ನಾಗಮಂಗಲ: ‘ನಾನು ಬಿಜೆಪಿ ಸೇರುತ್ತೇನೆ ಎಂಬ ಸುಳ್ಳು ಸುದ್ದಿ ಎರಡು ಮೂರು ದಿನಗಳಿಂದ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದೆ. ನಾನು ಮಾರಾಟಕ್ಕಿಲ್ಲ, ಯಾವ ಪಕ್ಷಕ್ಕೂ ಹೋಗುವುದಿಲ್ಲ’ ಎಂದು ಶಾಸಕ ಸುರೇಶ್ ಗೌಡ ಬುಧವಾರ ಇಲ್ಲಿ ಸ್ಪಷ್ಟಪಡಿಸಿದರು.

‘ನಾನು ಜೆಡಿಎಸ್‌ನ ಶಿಸ್ತಿನ ಸಿಪಾಯಿ. ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹಲವು ಸಲ ಸ್ಪಷ್ಟಪಡಿಸಿದ್ದೇನೆ. ಆದರೆ, ಮಾಧ್ಯಮದವರು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಪಕ್ಷ ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಬಿಟ್ಟು ಹೋಗುವುದಿಲ್ಲ. ಮಾಧ್ಯಮದವರನ್ನು ಮೆಚ್ಚಿಸಲು ನಾನೇನು ಎದೆ ಬಗೆದು ತೋರಿಸಬೇಕಾ’ ಎಂದು ಅವರು ಪ್ರಶ್ನಿಸಿದರು.

ಸುಳ್ಳುಸುದ್ದಿಗಳಿಗೆ ಕಿವಿಗೊಡ ದಂತೆ ಕ್ಷೇತ್ರದ ಜನರಿಗೆ ಮನವಿ ಮಾಡಿದ ಅವರು, ‘ಗಾಳಿ ಸುದ್ದಿ ಪ್ರಸಾರ ಮಾಡಬೇಡಿ. ನನ್ನನ್ನು ಕೇಳಿ ಖಚಿತಪಡಿಸಿಕೊಂಡ ಬಳಿಕ ಸುದ್ದಿ ಬಿತ್ತರಿಸಿ’ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.