ಬೆಂಗಳೂರು: ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ಕುರಿತು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ರಾಜ್ಯಕ್ಕೆ ಬಂದಿರುವ ‘ಕೈ’ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಂದೆ, ನಾಯಕತ್ವದ ಬಗ್ಗೆ ಕಾಂಗ್ರೆಸ್ನಲ್ಲಿ ಬಿರುಸುಗೊಂಡಿರುವ ‘ಬಣ ರಾಜಕೀಯ’ ಬಹಿರಂಗವಾಗಿದೆ.

ಸಚಿವರ ಕಾರ್ಯವೈಖರಿ, ವರ್ತನೆ, ಅನುದಾನ ಕೊರತೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೆಲವು ಶಾಸಕರು, ನಾಯಕತ್ವ ಬದಲಾವಣೆ ಪರ ಧ್ವನಿ ಎತ್ತಿದ್ದಾರೆ. ಇನ್ನೂ ಕೆಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಒಲವು ವ್ಯಕ್ತಪಡಿಸಿರುವುದು ಗೊತ್ತಾಗಿದೆ.

ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೊ’ ಭವನದಲ್ಲಿ ಮಂಗಳವಾರ ಇಡೀ ದಿನ ಪಕ್ಷದ ಶಾಸಕರ ಜೊತೆ ಸುರ್ಜೇವಾಲಾ ಅವರು ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದರು. ಕೆ.ವೈ. ನಂಜೇಗೌಡ, ಎನ್.ಎ. ಹ್ಯಾರಿಸ್, ಪ್ರಿಯ ಕೃಷ್ಣ, ಎ.ಸಿ. ಶ್ರೀನಿವಾಸ್, ರಾಜು ಕಾಗೆ ಸೇರಿದಂತೆ ಹಲವು ಶಾಸಕರು ಸುರ್ಜೇವಾಲಾ ಅವರನ್ನು ಭೇಟಿ ಮಾಡಿದರು.

ಜೊತೆಯಾಗಿ ಭೇಟಿ ಮಾಡಿ ತಮ್ಮ ಅಭಿಪ್ರಾಯವನ್ನು ಹೇಳಲು ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಸಕರಾದ ಎಚ್.ಸಿ. ಬಾಲಕೃಷ್ಣ, ಎಚ್.ಎ. ಇಕ್ಬಾಲ್ ಹುಸೇನ್ ಮತ್ತು ಸಿ.ಪಿ. ಯೋಗೇಶ್ವರ್ ಮುಂದಾಗಿದ್ದರು. ಒಂದೇ ಜಿಲ್ಲೆಯವರು ಒಂದೇ ಅಭಿಪ್ರಾಯ ವ್ಯಕ್ತಪಡಿಸಲು ಡಿ.ಕೆ. ಶಿವಕುಮಾರ್ ಆಪ್ತರಾದ ಈ ಶಾಸಕರು ಮನಸ್ಸು ಮಾಡಿದ್ದರು. ಆದರೆ, ಅದಕ್ಕೆ ಅವಕಾಶ ನೀಡದ ಸುರ್ಜೇವಾಲಾ, ಒಬ್ಬೊಬ್ಬರಾಗಿ ಭೇಟಿ ಮಾಡುವಂತೆ ಸೂಚನೆ ನೀಡಿದರು.

ಭೇಟಿಯ ವೇಳೆ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪಿಸಿದ ಇಕ್ಬಾಲ್ ಹುಸೇನ್, ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಅದಕ್ಕೆ ಸುರ್ಜೇವಾಲಾ, ‘ಬಹಿರಂಗವಾಗಿ ಏನನ್ನೂ ಮಾತನಾಡಬೇಡಿ. ಹೈಕಮಾಂಡ್ ಏನು ಮಾಡಬೇಕೊ ಅದನ್ನು ಮಾಡಲಿದೆ’ ಎಂದಿದ್ದಾರೆ ಎಂದು ಗೊತ್ತಾಗಿದೆ.

ಕೆ.ವೈ. ನಂಜೇಗೌಡ, ಕೃಷ್ಣಪ್ಪ, ಪ್ರಿಯ ಕೃಷ್ಣ, ರಾಜು ಕಾಗೆ ಸೇರಿದಂತೆ ಕೆಲವು ಶಾಸಕರು, ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಒಲವು ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಈ ಶಾಸಕರು, ‘ಮುಖ್ಯಮಂತ್ರಿ ಸ್ಥಾನದಲ್ಲಿ ಅವರೇ ಮುಂದುವರಿಯಬೇಕು. ಸಿದ್ದರಾಮಯ್ಯ ಇದ್ದರೆ ಮಾತ್ರ ಸರ್ಕಾರ ಉಳಿಯಲಿದೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಏನು ಹೇಳಬೇಕೊ ಎಲ್ಲವನ್ನೂ ಹೇಳಿದ್ದೇನೆ: ‘ವಸತಿ ಇಲಾಖೆಯಲ್ಲಿ ಲಂಚ ಪಡೆಯಲಾಗುತ್ತಿದೆ’ ಎಂದು ಶಾಸಕ ಬಿ.ಆರ್. ಪಾಟೀಲ ಧ್ವನಿ ಎತ್ತಿದ ಬೆನ್ನಲ್ಲೆ, ಸರ್ಕಾರದ ಕಾರ್ಯವೈಖರಿ ವಿರುದ್ಧ ಅಪಸ್ವರ ಎತ್ತಿದ್ದ ರಾಜು ಕಾಗೆ, ಸುರ್ಜೇವಾಲಾ ಅವರನ್ನು ಮಂಗಳವಾರ ಭೇಟಿ ಮಾಡಿದರು. ‘ಕೆಲವು ಸಚಿವರು ತಮಗೆ ಬೇಕಾದವರಿಗೆ ಮಾತ್ರ ಅನುದಾನ ನೀಡುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ. ರಾಜು ಕಾಗೆ ಅವರ ಮಾತನ್ನು ಸಮಾಧಾನದಿಂದ ಆಲಿಸಿದ ಸುರ್ಜೇವಾಲಾ, ಎಲ್ಲವನ್ನೂ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ‘ಪಕ್ಷದ ಉಸ್ತುವಾರಿ ಕರೆದಿದ್ದರು. ಅವರಿಗೆ ಏನು ಹೇಳಬೇಕೊ ಎಲ್ಲವನ್ನೂ ಹೇಳಿದ್ದೇನೆ’ ಎಂದು ರಾಜು ಕಾಗೆ ತಿಳಿಸಿದರು.

ಕೋಲಾರ ಬಣ ರಾಜಕೀಯ: ಮಾಲೂರು ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಸೋಮವಾರ ಕೆರಳಿದ್ದರು. ಸುರ್ಜೇವಾಲಾ ಅವರನ್ನು ಮಂಗಳವಾರ ಭೇಟಿ ಮಾಡಿದ ನಂಜೇಗೌಡ ಅವರು ಕೋಲಾರ ಜಿಲ್ಲಾ ಬಣ ರಾಜಕೀಯದ ಬಗ್ಗೆ ಹೇಳಿಕೊಂಡಿದ್ದಾರೆ. ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ ಎಂದು ದೂರು ನೀಡಿರುವ ನಂಜೇಗೌಡ, ನಾರಾಯಣಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ನಂಜೇಗೌಡ, ‘ನಾರಾಯಣಸ್ವಾಮಿ ಯಾವ ಪಾರ್ಟಿಯಲ್ಲಿದ್ದಾರೆಂದು ಗೊತ್ತಿಲ್ಲ. ನಮ್ಮ ತಾತ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ನಾನು ಮಂಡಲ ಪಂಚಾಯಿತಿಯಲ್ಲಿ ಕೆಲಸ ಮಾಡಿದ್ದೆ. ಮೂಲತಃ ಕಾಂಗ್ರೆಸಿಗ’ ಎಂದರು.

ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ. ಶಿವಕುಮಾರ್ ಕೊಡುಗೆ ಇದೆ. ಅವರಿಗೂ ಅವಕಾಶ ಕೊಡಬೇಕು ಎಂದಿದ್ದೇನೆ. ನಾಳೆಯೇ ಅವಕಾಶ ಕೊಡಬೇಕು ಎಂದು ಹೇಳಿಲ್ಲ
ಎಚ್.ಸಿ. ಬಾಲಕೃಷ್ಣ, ಮಾಗಡಿ ಶಾಸಕ

ನಾಯಕತ್ವ ವಿಚಾರ ಚರ್ಚಿಸುತ್ತಿಲ್ಲ: ಸುರ್ಜೇವಾಲಾ

‘ನಾಯಕತ್ವ ಬದಲಾವಣೆ ಸಂಬಂಧ ಶಾಸಕರ ಜೊತೆ ನಾನು ಚರ್ಚೆ ಮಾಡುತ್ತಿಲ್ಲ. ಆ ಕುರಿತು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿಲ್ಲ’ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪಕ್ಷ ಸಂಘಟನೆ ಕುರಿತು ಅಭಿಪ್ರಾಯ ಪಡೆಯುವ ಜೊತೆಗೆ, ಶಾಸಕರ ಆಕಾಂಕ್ಷೆಗಳು, ಬೇಡಿಕೆಗಳು, ಈವರೆಗಿನ ಸಾಧನೆಗಳ ಕುರಿತು ಮಾಹಿತಿ ಪಡೆಯುತ್ತಿದ್ದೇನೆ’ ಎಂದರು.

‘ಬ್ಲಾಕ್ ಕಾಂಗ್ರೆಸ್ ಸೇರಿದಂತೆ ಇತರ ವಿಭಾಗಗಳು ಮತ್ತು ಪಕ್ಷದ ಮುಂಚೂಣಿ ಘಟಕಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪಂಚ ಗ್ಯಾರಂಟಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇನೆ. ಶಾಸಕರ ಅಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರುತ್ತೇನೆ’ ಎಂದರು.

‘ಮೈಸೂರು ಮತ್ತು ಬೆಂಗಳೂರು ವಿಭಾಗದ ಶಾಸಕರನ್ನು ಭೇಟಿ ಮಾಡಿದ್ದೇನೆ. ಮುಂದಿನ ಸೋಮವಾರದಿಂದ ಇತರ ವಿಭಾಗಗಳ ಶಾಸಕರನ್ನೂ ಭೇಟಿ ಮಾಡುತ್ತೇನೆ. ನಂತರ ಹಾಲಿ, ಮಾಜಿ ಸಂಸದರನ್ನು ಭೇಟಿ ಮಾಡುತ್ತೇನೆ’ ಎಂದರು.

ಸಿದ್ದರಾಮಯ್ಯ ಕೈ ಬಲಪಡಿಸಬೇಕಿದೆ: ಡಿಕೆಶಿ

‘ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವು ಯಾರೂ ಈಗ ಆತುರದಲ್ಲಿ ಇಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕಿದೆ’ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ‘ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಮಾಡುತ್ತಿಲ್ಲ. ಈ ಸಭೆಯ ಬಗ್ಗೆ ಯಾರಿಗೂ ಆತಂಕ ಬೇಡ’ ಎಂದರು.

ನೋಟಿಸ್ ನೀಡುತ್ತೇನೆ: ‘ನೀವು ಮುಖ್ಯಮಂತ್ರಿ ಆಗಲಿದ್ದಾರೆಂದು ಶಾಸಕ ಇಕ್ಬಾಲ್ ಹುಸೇನ್ ಹೇಳುತ್ತಿದ್ದಾರೆ’ ಎಂದಾಗ, ‘ನಾನು ಮುಖ್ಯಮಂತ್ರಿ ಆಗುತ್ತೇನೆಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಇಕ್ಬಾಲ್ ಹುಸೇನ್, ಬಿ.ಆರ್. ಪಾಟೀಲ, ಎಚ್.ಸಿ. ಬಾಲಕೃಷ್ಣ ಯಾರೇ ಆಗಲಿ ಮಾತನಾಡಬಾರದು’ ಎಂದು ಎಚ್ಚರಿಕೆ ನೀಡಿದರು.

‘ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಪಕ್ಷ ಸಂಘಟನೆ ಕುರಿತು ಶಾಸಕರಿಗೆ ಮಾರ್ಗದರ್ಶನ ನೀಡಲು ಸುರ್ಜೇವಾಲಾ ಬಂದಿದ್ದಾರೆ. ಶಾಸಕರ ಅಹವಾಲುಗಳನ್ನೂ ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಅವರು ಪ್ರಯತ್ನಿಸುತ್ತಿದ್ದಾರೆ. ನಮಗೆ 2028 ಬಹಳ ಮುಖ್ಯ’ ಎಂದರು.

ಅಭಿವೃದ್ಧಿಗೆ ₹1 ಲಕ್ಷ ಕೋಟಿ: ‘ಅನುದಾನ ವಿಚಾರವಾಗಿ ಬಿ.ಆರ್. ಪಾಟೀಲ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ’ ಎಂದಾಗ, ‘ಅಭಿವೃದ್ಧಿ ಕೆಲಸಗಳಿಗಾಗಿ ಬಜೆಟ್ನಲ್ಲಿ ₹1 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ. ₹54 ಸಾವಿರ ಕೋಟಿ ಗ್ಯಾರಂಟಿಗಳಿಗೆ, ₹19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವೆಚ್ಚ ಮಾಡಲಾಗುತ್ತಿದೆ. ಸಮಾಜ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಷೇತ್ರಗಳ ಅಭಿವೃದ್ಧಿಗಳಿಗೆ ಅಲ್ಲವೇ’ ಎಂದು ಅವರು ಪ್ರಶ್ನಿಸಿದರು.

ಇಕ್ಬಾಲ್ ಹುಸೇನ್ಗೆ ನೋಟಿಸ್

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದಲ್ಲಿ ಗೊಂದಲ ಮತ್ತು ಮುಜುಗರ ಉಂಟು ಮಾಡಿದ್ದಾರೆಂಬ ಕಾರಣಕ್ಕೆ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರಿಗೆ ಡಿ.ಕೆ. ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

‘ತಮ್ಮ ಬಹಿರಂಗ ಹೇಳಿಕೆ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಈ ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ನೋಟಿಸ್ ತಲುಪಿದ ವಾರದೊಳಗೆ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು’ ಎಂದು ಶಿವಕುಮಾರ್ ಸೂಚಿಸಿದ್ದಾರೆ.

‘ಎರಡೂವರೆ ವರ್ಷ ಶಿವಕುಮಾರ್ಗೆ ಬಿಟ್ಟುಕೊಡಲಿ’

ಸಿದ್ದರಾಮಯ್ಯ ಹಿಂದೆ ಐದು ವರ್ಷ, ಮತ್ತೆ ಈಗ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿದ್ದಾರೆ. ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನವನ್ನು ಶಿವಕುಮಾರ್ ಅವರಿಗೆ ಬಿಟ್ಟು ಕೊಡಲಿ. ಶಿವಕುಮಾರ್ ಅವರಿಗೆ ಸಾಕಷ್ಟು ಶಾಸಕರ ಬೆಂಬಲ ಇದೆ. ಹೈಕಮಾಂಡ್ ಬೆಂಬಲವೂ ಇದೆ’ ಎಂದು ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಈಗಾಗಲೇ ನೀಡಿರುವ ಹೇಳಿಕೆಗೆ ಬದ್ಧನಾಗಿದ್ದೇನೆ. ನಮಗೆಲ್ಲ ಬದಲಾವಣೆ ಬೇಕು. ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಡಿ.ಕೆ. ಶಿವಕುಮಾರ್ ಅವರು ಪಕ್ಷ ಸಂಘಟನೆ ಮಾಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಮಾಡಿದರೆ 2028ರಲ್ಲಿಯೂ ಸರ್ಕಾರ ಬರಲು ಸುಗಮ ಆಗಲಿದೆ. ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.