ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‍ಪರಿಷತ್‌ ಚುನಾವಣೆ | ಬಂಡಾಯ ಸ್ಪರ್ಧೆ: ಕಾಂಗ್ರೆಸ್‌ನಿಂದ ಐವರ ಉಚ್ಚಾಟನೆ

Published 23 ಮೇ 2024, 16:32 IST
Last Updated 23 ಮೇ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿರುವ ಐವರು ಮುಖಂಡರನ್ನು 6 ವರ್ಷಗಳ ಅವಧಿಗೆ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದ ಕೆಪಿಸಿಸಿ ಉಚ್ಚಾಟಿಸಿದೆ.

ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್‌.ಪಿ. ದಿನೇಶ್‌, ನೈರುತ್ಯ ಶಿಕ್ಷಕರ ಕ್ಷೇತ್ರದ ಬಿ.ಆರ್. ನಂಜೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಫರ್ನಾಂಡಿಸ್‌ ಲಾರೆನ್ಸ್‌, ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಗಳಾದ ಲೋಕೇಶ್‌ ತಾಳಿಕಟ್ಟೆ ಹಾಗೂ ವಿನೋದ್‌ ಶಿವರಾಜ್‌ ಅವರನ್ನು ಉಚ್ಚಾಟಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT