ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬುಧವಾರ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ 16) ಕೊನೆದಿನವಾಗಿದೆ.

ಈವರೆಗೆ 47 ಪುರುಷರು ಮತ್ತು ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನ ಐದು, ಬಿಜೆಪಿಯ ನಾಲ್ಕು ಮತ್ತು ಜೆಡಿಎಸ್‌ನ ಒಬ್ಬ ಅಭ್ಯರ್ಥಿ ಈವರೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ 40 ಮಂದಿ ಕೂಡ ಕಣಕ್ಕಿಳಿದಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅತ್ಯಧಿಕ 14 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 11, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು, ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ತಲಾ ಆರು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.