ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂದು ನಾನು ಉಚ್ಛಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಛಾಟಿತ ವ್ಯಕ್ತಿ: ಅಲಿಯಾ

Published 28 ಮೇ 2024, 12:44 IST
Last Updated 28 ಮೇ 2024, 12:44 IST
ಅಕ್ಷರ ಗಾತ್ರ

ಉಡುಪಿ: ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಅಲಿಯಾ ಅಸಾದಿ ಉಚ್ಛಾಟಿತ ಮಾಜಿ ಶಾಸಕ ರಘುಪತಿ ಭಟ್‌ ಅವರ ರಾಜಕೀಯ ಸ್ಥಿತಿಯ ಕುರಿತು ‘ಎಕ್ಸ್‌’ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ.

‘ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ. ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು’ ಎಂದಿದ್ದಾರೆ.

‘ಅಂದು ನಾನು ಉಚ್ಛಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಛಾಟಿತ ವ್ಯಕ್ತಿ’ ಎಂದು ಅಲಿಯ ಅಸಾದಿ ವ್ಯಂಗ್ಯವಾಡಿದ್ದಾರೆ. ವಿದ್ಯಾರ್ಥಿನಿಯ ಟ್ವೀಟ್‌ಗೆ ನೂರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT