ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಹೆದ್ದಾರಿಗೆ ಒಡೆಯರ್ ಹೆಸರಿಡಿ: ಕಾಂಗ್ರೆಸ್‌

Last Updated 26 ಡಿಸೆಂಬರ್ 2022, 6:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿಮುಖ್ಯಮಂತ್ರಿಗೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾದ ದಿನೇಶ್ ಗೂಳಿಗೌಡ ಮತ್ತು ಮಧು ಜಿ. ಮಾದೇಗೌಡ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಸಚಿವರಾದ ಸಿ.ಸಿ. ಪಾಟೀಲ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಅವರು, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೂ ಪತ್ರ ಬರೆದಿದ್ದಾರೆ.

ಒಡೆಯರ್‌ ಹೆಸರು ನಾಮಕರಣ ಮಾಡುವ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ಕೆ. ಗೋಪಾಲಯ್ಯ ಮತ್ತು ಕೆ.ಸಿ. ನಾರಾಯಣ ಗೌಡ ಭರವಸೆ ನೀಡಿದ್ದಾರೆ.

ಮನವಿಯಲ್ಲಿ ಏನಿದೆ?: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌), ಬೆಂಗಳೂರಿಗೆ ಕುಡಿಯುವ ನೀರು, ಶಿವನ ಸಮುದ್ರ ಜಲ ವಿದ್ಯುತ್ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ, ದೇಶದಲ್ಲಿ ಮೊದಲ ಬಾರಿಗೆ ರಸ್ತೆಬದಿಗೆ ದಾರಿದೀಪ, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಬಾಲ್ಯ ವಿವಾಹ ನಿಷೇಧ, ಕೆ.ಆರ್. ಆಸ್ಪತ್ರೆ, ಶ್ರೀಗಂಧದ ಎಣ್ಣೆ ಕಾರ್ಖಾನೆ ಸೇರಿದಂತೆ ನೂರಾರು ಸಮಾಜಮುಖಿ ಕಾರ್ಯಗಳನ್ನು ನಾಲ್ವಡಿ ಒಡೆಯರ್ ಮಾಡಿದ್ದಾರೆ’ ಎಂದು ಮನವಿಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT