ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಹತ್ಯೆ; ಆರೋಪಿಗಳ ವಿಚಾರಣೆ ಆರಂಭ

Last Updated 27 ಆಗಸ್ಟ್ 2018, 18:55 IST
ಅಕ್ಷರ ಗಾತ್ರ

ಬೆಂಗಳೂರು:ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಸಿಐಡಿ ಪೊಲೀಸರು ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸೋಮವಾರ ವಿಚಾರಣೆಗೆ ಒಳಪಡಿಸಿದರು.

ಬೆಳಿಗ್ಗೆ 12 ಗಂಟೆಗೆ ಜೈಲಿಗೆ ಹೋಗಿದ್ದ ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡ, ಆರೋಪಿಗಳನ್ನು ಒಬ್ಬೊಬ್ಬರನ್ನಾಗಿ ಪ್ರತ್ಯೇಕ ಕೊಠಡಿಗೆ ಕರೆಸಿ ವಿಚಾರಣೆ ನಡೆಸಿತು. ಸಂಜೆ 4 ಗಂಟೆಗೆ ವಿಚಾರಣೆ ಮುಗಿಸಿ ತಂಡವು ಹೊರಗೆ ಬಂತು.

‘ವಿಜಯಪುರದ ಪರಶುರಾಮ ವಾಘ್ಮೋರೆಯನ್ನೇ ಮೊದಲಿಗೆ ವಿಚಾರಣೆ ನಡೆಸಲಾಗಿದೆ. ಆದರೆ, ಆತನಿಂದ ಯಾವ ಮಾಹಿತಿ ಪಡೆಯಲಾಯಿತು ಎಂಬುದು ಗೊತ್ತಾಗಿಲ್ಲ’ ಎಂದು ಜೈಲಿನ ಮೂಲಗಳು ತಿಳಿಸಿವೆ.

ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಐಡಿ ಅಧಿಕಾರಿಯೊಬ್ಬರು, ‘ವಿಚಾರಣೆ ಆರಂಭಿಸಿದ್ದೇವೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಎಲ್ಲ ವಿಷಯವನ್ನು ಬಹಿರಂಗಪಡಿಸಲಾಗದು’ ಎಂದರು.

ಎಸ್‌ಐಟಿ ಪೊಲೀಸರು ಬಂಧಿಸಿರುವ ಮಹಾರಾಷ್ಟ್ರದ ಅಮೋಲ್‌ ಕಾಳೆ, ಅಮಿತ್ ದೇಗ್ವೇಕರ್‌, ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್, ಅಮಿತ್‌ ಬದ್ದಿ, ವಿಜಯಪುರದ ಪರಶುರಾಮ್ ವಾಘ್ಮೋರೆ, ಮನೋಹರ್ ಯಡವೆ, ಮದ್ದೂರಿನ ಕೆ.ಟಿ.ನವೀನ್‌ ಕುಮಾರ್‌, ಸಂಪಾಜೆಯ ಮೋಹನ್ ನಾಯಕ್‌ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಂಶೋಧಕ ಧಾರವಾಡದ ಎಂ.ಎಂ.ಕಲಬುರ್ಗಿ ಅವರ ಹತ್ಯೆಯಲ್ಲೂ ಆ ಆರೋಪಿಗಳ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು, ಸಿಐಡಿಯ ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ್ದರು. ಹೀಗಾಗಿಯೇ ನ್ಯಾಯಾಲಯದ ಅನುಮತಿ ಪಡೆದಿರುವ ಸಿಐಡಿ ಪೊಲೀಸರು, ಆಗಸ್ಟ್ 31ರವರೆಗೆ ಜೈಲಿನಲ್ಲೇ ಆರೋಪಿಗಳ ವಿಚಾರಣೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT