ಶಾಲೆಗಳಲ್ಲಿ ಮೊಬೈಲ್ ನಿಷೇಧ ಚರ್ಚೆಯಲ್ಲಿದೆ– ಡಿಕೆಶಿ
‘ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅನೇಕ ದೇಶಗಳಲ್ಲಿ ಈಗಾಗಲೇ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ’ ಎಂದರು.
ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, ‘ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ’ ಎಂದರು.