ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎ.ನಾರಾಯಣಸ್ವಾಮಿ: ಮೊದಲ ಅವಧಿಯಲ್ಲೇ ಸಚಿವ ಸ್ಥಾನ ಪಡೆದ ಹೆಗ್ಗಳಿಕೆ

Published : 7 ಜುಲೈ 2021, 12:48 IST
ಫಾಲೋ ಮಾಡಿ
Comments

ಚಿತ್ರದುರ್ಗ: ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆ ಎ.ನಾರಾಯಣಸ್ವಾಮಿ ಅವರದು. ಈ ಅವಕಾಶ ಅವರನ್ನು ಅನಿರೀಕ್ಷಿತವಾಗಿ ಆರಸಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ನಿವಾಸಿಯಾದ ಇವರು ಕೃಷಿ, ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. 2019ರಲ್ಲಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ವಿದ್ಯಾರ್ಥಿ ದಿಸೆಯಿಂದಲೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಇವರು ಸಂಘಪರಿವಾರದ ನಾಯಕರಿಗೂ ಆಪ್ತರು. ರಾಜ್ಯ ಕಿಸಾನ್‌ ಮೋರ್ಚಾದ ಸದಸ್ಯರಾಗಿ ಕೆಲಸ ಮಾಡಿದ್ದಾರೆ. 1996ರಲ್ಲಿ ಆನೇಕಲ್‌ ಪುರಸಭೆಗೆ ನಡೆದ ಚುನಾವಣೆಯಲ್ಲಿ ಸದಸ್ಯರಾಗಿ ಆಯ್ಕೆಯಾದರು. ಮರು ವರ್ಷವೇ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ವಿಜೇತರಾಗಿ ವಿಧಾನಸೌಧ ಪ್ರವೇಶಿಸಿದರು. ಆನೆಕಲ್‌ ವಿಧಾನಸಭಾ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ.

2010ರಿಂದ 2013ರವರೆಗೆ ಸಮಾಜಕಲ್ಯಾಣ ಸಚಿವರಾಗಿ ಕೆಲಸ ಮಾಡಿದ್ದಾರೆ. 64 ವರ್ಷದ ನಾರಾಯಣಸ್ವಾಮಿ ಬಿ.ಎ ಪದವೀಧರರು. ಇವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT