ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಗೆ ಆ.10ರಂದು ಬೆಂಗಳೂರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರತಿ ಮೆಟ್ರೊ ನಿಲ್ದಾಣಗಳಲ್ಲೂ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಹಳದಿ ಮಾರ್ಗದಲ್ಲಿ ಮೆಟ್ರೊ ರೈಲುಗಳ ಸಂಚಾರದಿಂದ ಎಂಟು ಲಕ್ಷ ಜನರಿಗೆ ಅನುಕೂಲವಾಗಲಿದೆ. ಮೆಟ್ರೊ ಕಾಮಗಾರಿಯ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಶ್ರಮವಿದೆ. ಬೆಂಗಳೂರಿನಲ್ಲಿ ಅಂದು ಹಬ್ಬದ ವಾತಾವರಣ ಇರುತ್ತದೆ ಎಂದರು.

ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಎಲ್ಲ ನಿಲ್ದಾಣಗಳಲ್ಲೂ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಅವರಿಗೆ ಸ್ವಾಗತ ಕೋರುತ್ತಾರೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಮೆಟ್ರೊ ಸಂಪರ್ಕ ಜಾಲ ಸುಮಾರು 100 ಕಿ.ಮೀ ತಲುಪಲು ನರೇಂದ್ರ ಮೋದಿ ಅವರು ಬೆಂಗಳೂರಿನ ಮೂಲಸೌಕರ್ಯಕ್ಕೆ ಕೊಟ್ಟ ಆದ್ಯತೆಯೇ ಕಾರಣ. 2014ರಲ್ಲಿ ಮೋದಿಯವರು ಪ್ರಧಾನಿ ಆಗುವುದಕ್ಕೆ ಮೊದಲು ಬೆಂಗಳೂರಿನ ಮೆಟ್ರೊ ಸಂಪರ್ಕ ಜಾಲ 7.5 ಕಿಮೀ. ಇತ್ತು. ದೆಹಲಿ ನಂತರ ಅತಿ ಹೆಚ್ಚು ಸಂಪರ್ಕ ಇರುವ, ವಿಸ್ತರಣೆ ಆಗುತ್ತಿರುವ ಮೆಟ್ರೊ ಬೆಂಗಳೂರು ಎಂದು ವಿವರ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.