ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 14 ರಂದು ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ

Published 7 ಏಪ್ರಿಲ್ 2024, 16:28 IST
Last Updated 7 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಮತ್ತು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಇದೇ 14 ರಂದು ಚುನಾವಣಾ ಪ್ರಚಾರ ಸಭೆ ಮತ್ತು ರೋಡ್‌ ಶೋ ನಡೆಸಲಿದ್ದಾರೆ.

ಅಂದು ಅವರು ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದಾರೆ. ಆ ಬಳಿಕ ಅವರು ರಾಮನಗರ– ಚನ್ನಪಟ್ಟಣದಲ್ಲಿ ಈ ಎರಡರಲ್ಲಿ ಒಂದು ಕಡೆ  ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್‌ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT