ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶೀಘ್ರವೇ ಮಂಗನಕಾಯಿಲೆ (ಕೆಎಫ್ಡಿ) ಪರೀಕ್ಷಾ ಪ್ರಯೋಗಾಲಯವನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ಬುಧವಾರ ವಿಕಾಸಸೌಧದಲ್ಲಿ ಇಲಾಖಾ ಅಧಿಕಾರಿಗಳ ಜತೆ ಸಭೆ ನಡೆಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ಈಗ ಒಂದು ಪ್ರಯೋಗಾಲಯವಿದೆ. ಅದರ ಮೇಲೆ ಒತ್ತಡ ಹೆಚ್ಚಾಗಿರುವುದರಿಂದ ಶಿರಸಿಯಲ್ಲಿ ಹೊಸ ಪ್ರಯೋಗಾಲಯ ಆರಂಭಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಅಗತ್ಯ ಉಪಕರಣಗಳನ್ನು ಖರೀದಿಸಲಾಗಿದೆ. ಇದರಿಂದ ಶಿರಸಿ ಮತ್ತು ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಿ, ಚಿಕಿತ್ಸೆ ನೀಡಿ ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ ಎಂದು ಹೇಳಿದರು.

ಈವರೆಗೆ ಶಿವಮೊಗ್ಗದಲ್ಲಿ 1,163, ಚಿಕ್ಕಮಗಳೂರು 124, ಉತ್ತರಕನ್ನಡ 368, ಉಡುಪಿ 12 ಜನ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. 13 ಜನರಲ್ಲಿ ಕಾಯಿಲೆ ಪತ್ತೆಯಾಗಿದ್ದು, ಎಲ್ಲರಿಗೂ ಸರಿಯಾದ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲರೂ ಗುಣಮುಖರಾಗಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.