ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) 3.11 ಲಕ್ಷ ವಿದ್ಯಾರ್ಥಿಗಳು ಬರೆದರು.

ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ ರಸಾಯನವಿಜ್ಞಾನ ಪರೀಕ್ಷೆಗಳು ಎಲ್ಲ 775 ಕೇಂದ್ರಗಳಲ್ಲೂ ಸುಸೂತ್ರವಾಗಿ ನಡೆದವು. ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದ 3,21,895 ವಿದ್ಯಾರ್ಥಿಗಳಲ್ಲಿ ಶೇ 94.20ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದರು.

ಇದೇ ಮೊದಲ ಬಾರಿ ಕ್ಯೂಆರ್ ಕೋಡ್ ಮೂಲಕ ಮುಖ ಚಹರೆ ಪತ್ತೆ ಮಾಡಿದ ನಂತರವೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಬೆಳಗಿನ ಪರೀಕ್ಷೆಗೆ ಕೆಲ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂತು. ಪ್ರವೇಶ ಪತ್ರ ಇಲ್ಲದೆ, ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರದಾಡುತ್ತಿದ್ದ ಕೆಲ ವಿದ್ಯಾರ್ಥಿಗಳಿಗೆ ಕೊನೆ ಕ್ಷಣದಲ್ಲಿ ಕೆಇಎ ಸಿಬ್ಬಂದಿ ಪ್ರವೇಶ ಪತ್ರ ಒದಗಿಸಿ, ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.