ಬೆಂಗಳೂರು: ಆರ್ಥಿಕ ಸಂಕಷ್ಟ, ನಿರುದ್ಯೋಗ, ಕೌಟುಂಬಿಕ ಕಲಹ ಸೇರಿ ವಿವಿಧ ಕಾರಣಗಳಿಂದ ಮಾನಸಿಕ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿದ್ದು, ಮನೋವ್ಯಾಧಿಗೆ ಸಂಬಂಧಿಸಿದಂತೆ ಐದು ವರ್ಷಗಳಲ್ಲಿ 47.89 ಲಕ್ಷ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮಾಲೋಚನೆ ಹಾಗೂ ಚಿಕಿತ್ಸೆ ಒದಗಿಸಲಾಗಿದೆ.

ಆರೋಗ್ಯ ಇಲಾಖೆಯು ಮಾನಸಿಕ ಆರೋಗ್ಯ ಕಾರ್ಯಕ್ರಮಗಳಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆಪ್ತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡುತ್ತಿದೆ. ಎಲ್ಲ ಜಿಲ್ಲಾ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಮನೋವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಮನೋಚೈತನ್ಯ’ ಕಾರ್ಯಕ್ರಮದ ಮೂಲಕ ಆಯ್ದ ಮಂಗಳವಾರ ಹಾಗೂ ಶುಕ್ರವಾರ ತಜ್ಞ ಮನೋವೈದ್ಯರ ತಂಡವು ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತಿವೆ. ಇದಲ್ಲದೆ, ‘ಕ್ಷೇಮ’ ಸೇರಿದಂತೆ ವಿವಿಧ ಕಾರ್ಯಕ್ರಮಗಳಡಿ ಮಾನಸಿಕ ಅಸ್ವಸ್ಥರಿಗೆ ಆರೋಗ್ಯ ಇಲಾಖೆಯು ಚಿಕಿತ್ಸೆಯ ಜತೆಗೆ ಪುನರ್ವಸತಿ ಒದಗಿಸುತ್ತಿದೆ. ಇದರಿಂದಾಗಿ ಅಧಿಕ ಸಂಖ್ಯೆಯಲ್ಲಿ ಮಾನಸಿಕ ಅನಾರೋಗ್ಯ ಪ್ರಕರಣಗಳು ದೃಢಪಡುತ್ತಿದ್ದು, ಇಲಾಖೆ ಪ್ರಕಾರ ಎಲ್ಲ ವಯೋಮಾನದವರಲ್ಲಿಯೂ ಈ ಸಮಸ್ಯೆಗಳು ಕಾಣಸಿಕೊಳ್ಳುತ್ತಿವೆ.

ಮಾನಸಿಕ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸೇರಿ ವಿವಿಧ ಸಂಸ್ಥೆಗಳು ಜಾಗೃತಿ ಮೂಡಿಸುತ್ತಿವೆ. ನಿಮ್ಹಾನ್ಸ್ ‘ಟೆಲಿ ಮನಸ್’ ಸಹಾಯವಾಣಿ (14416) ಮೂಲಕ ಉಚಿತವಾಗಿ ವಾರದ ಎಲ್ಲ ದಿನಗಳು 24 ಗಂಟೆಗಳೂ ಸಮಾಲೋಚನೆ ಒದಗಿಸಲಾಗುತ್ತಿದೆ. ಇದರಿಂದಾಗಿ ಮಾನಸಿಕ ಅಸ್ವಸ್ಥತೆ ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡುತ್ತಿದೆ.

ಯುವಜನರೇ ಅಧಿಕ: ನಿಮ್ಹಾನ್ಸ್ ವೈದ್ಯರ ಪ್ರಕಾರ ಖಿನ್ನತೆಯಂತಹ ಮಾನಸಿಕ ಅನಾರೋಗ್ಯ ಸಮಸ್ಯೆಗೆ ಒಳಗಾಗುತ್ತಿರುವವರಲ್ಲಿ ಯುವಜನರ ಸಂಖ್ಯೆಯೇ ಅಧಿಕ. ಉದ್ಯೋಗ ದೊರೆಯದಿರುವುದು, ಅಲ್ಪಾವಧಿಯಲ್ಲಿ ಯಶಸ್ಸು ಸಾಧಿಸುವ ಹಂಬಲ, ಮೊಬೈಲ್ನಂತಹ ಡಿಜಿಟಲ್ ಸಾಧನಗಳ ಅತಿಯಾದ ಬಳಕೆ, ನಗರೀಕರಣ, ಕೌಟುಂಬಿಕ ಸಮಸ್ಯೆ, ಒಂಟಿತನ, ವೃತ್ತಿ ಸ್ಥಳದಲ್ಲಿ ಮಾನಸಿಕ ಒತ್ತಡ ಸೇರಿ ವಿವಿಧ ಕಾರಣಗಳು ಮಾನಸಿಕ ಅನಾರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತಿವೆ. ನಿಮ್ಹಾನ್ಸ್ ಸಂಸ್ಥೆಯ ವಿಶ್ಲೇಷಣೆ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮೂರನೇ ಒಂದರಷ್ಟು ಮಂದಿ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಉಳಿದ ಎರಡು ಭಾಗದಷ್ಟು ಮಂದಿ ಆರ್ಥಿಕ ಸಮಸ್ಯೆ ಹಾಗೂ ಕುಟುಂಬದ ಬಾಂಧವ್ಯ ಕಡಿದುಕೊಳ್ಳುವಿಕೆಯಿಂದ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ.

‘ಮಾನಸಿಕ ಅನಾರೋಗ್ಯವು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಒಳಗಾದವರಲ್ಲಿ ಆತಂಕ ಹಾಗೂ ಉನ್ಮಾದ, ನಿದ್ರಾಹೀನತೆ ಮತ್ತು ದುಃಸ್ವಪ್ನಗಳು ಕಾಣಿಸಿಕೊಳ್ಳುವುದು, ಅಸುರಕ್ಷಿತ ಭಾವನೆ, ಏಕಾಗ್ರತೆ ಕಳೆದುಕೊಳ್ಳುವುದು, ಉದ್ಯೋಗದಲ್ಲಿ ಆಸಕ್ತಿ ಕಳೆದುಕೊಳ್ಳುವುದು ಸೇರಿ ವಿವಿಧ ಸಾಮಾನ್ಯ ಲಕ್ಷಣಗಳನ್ನು ಗುರುತಿಸಬಹುದಾಗಿದೆ. ಈ ಲಕ್ಷಣಗಳ ಅನುಸಾರ ಸಮಸ್ಯೆ ಗುರುತಿಸಿ, ಚಿಕಿತ್ಸೆ ಒದಗಿಸಬೇಕು’ ಎಂದು ನಿಮ್ಹಾನ್ಸ್ ವೈದ್ಯರು ‘ಪ್ರಜಾವಾಣಿ’ಗೆ ತಿಳಿಸಿದರು.

ಒತ್ತಡದ ಪರಿಸ್ಥಿತಿ ಇರುವುದರಿಂದ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದರಿಂದ ಖಿನ್ನತೆಯಂತಹ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ.
-ಡಾ. ಶಶಿಧರ್ ಎಚ್.ಎನ್., ನಿಮ್ಹಾನ್ಸ್ನ ಸ್ಥಾನಿಕ ವೈದ್ಯಾಧಿಕಾರಿ (ಆರ್ಎಂಒ)

ಮಕ್ಕಳು ಹದಿಹರೆಯದವರಲ್ಲೂ ಸಮಸ್ಯೆ

ಶೈಕ್ಷಣಿಕ ಒತ್ತಡ ಪರೀಕ್ಷೆ ಅತಿಯಾಗಿ ಡಿಜಿಟಲ್ ಸಾಧನಗಳ ಬಳಕೆ ಸೇರಿ ವಿವಿಧ ಕಾರಣಗಳಿಂದ ಮಕ್ಕಳು ಹಾಗೂ ಹದಿಹರೆಯದವರಲ್ಲೂ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕಳೆದ ಮೂರು ವರ್ಷಗಳಲ್ಲಿ 28.24 ಲಕ್ಷ ಮಾನಸಿಕ ಅನಾರೋಗ್ಯ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ 1.36 ಲಕ್ಷ ಮಂದಿ ಮಕ್ಕಳು ಹಾಗೂ ಹದಿಹರೆಯದವರಾಗಿದ್ದಾರೆ. ‘ಪರೀಕ್ಷೆಗಳಲ್ಲಿ ಅಧಿಕ ಅಂಕ ಪಡೆಯುವಂತೆ ಪಾಲಕರು ಒತ್ತಡ ಹೇರುತ್ತಿರುವುದರಿಂದ ಮಕ್ಕಳಲ್ಲಿ ಸಹ ಮಾನಸಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಆಗಾಗ ಸಿಟ್ಟು ಮಾಡಿಕೊಂಡು ಕಿರುಚಾಟ ನಡೆಸುವುದು ನಿರಂತರ ಹಟ ಮಾಡುವುದು ಕೂಡಾ ಮಾನಸಿಕ ಕಾಯಿಲೆಯ ಸ್ವರೂಪವಾಗಿದೆ. ಪೋಷಕರು ಮಕ್ಕಳಲ್ಲಿನ ಬದಲಾವಣೆಯನ್ನು ಗುರುತಿಸಿ ಅವರ ಬೇಕು ಬೇಡಗಳನ್ನು ಅರಿತುಕೊಳ್ಳಬೇಕು. ಈ ಮೂಲಕ ಮುಂದೆ ಆಗಬಹುದಾದ ಅನಾಹುತ ತಡೆಯಲು ಸಾಧ್ಯ’ ಎಂದು ನಿಮ್ಹಾನ್ಸ್ ವೈದ್ಯರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.