ವಿಮಾನದಲ್ಲಿ ಸಾಕಷ್ಟು ಇಂಧನ ಸಂಗ್ರಹವಿತ್ತು. ಹೀಗಾಗಿ ಎನೂ ತೊಂದರೆ ಇರಲಿಲ್ಲ. ವಾತಾವರಣ ಸಮಸ್ಯೆಯಿಂದ ತಡವಾಗಿ ಲ್ಯಾಂಡ್ ಆಗಿದೆ. ಸ್ಥಳೀಯ ವಾತಾವರಣ ಹಾಗೂ ಲ್ಯಾಂಡಿಂಗ್ ತಡವಾಗುವುದರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಇಂಡಿಗೊ ಸಂಸ್ಥೆಯ ಸಿಬ್ಬಂದಿಯೊಬ್ಬರು ಪ್ರಜಾವಾಣಿಗೆ ತಿಳಿಸಿದರು. ಈ ವಿಮಾನದಲ್ಲಿ 40 ಪ್ರಯಾಣಿಕರು ಇದ್ದರು.